Free mushroom training- ಉಚಿತ ಅಣಬೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ಜಿಲ್ಲೆ ಕೇಂದ್ರದಿಂದ ಉಚಿತ ಅಣಬೆ ಬೇಸಾಯ ಮತ್ತು ಜೇನು ಸಾಕಾಣಿಕೆ ತರಬೇತಿ(Free mushroom training) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

Free mushroom training- ಉಚಿತ ಅಣಬೆ ತರಬೇತಿ ಪಡೆಯಲು ಅರ್ಜಿ ಆಹ್ವಾನ!
mushroom training

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ಜಿಲ್ಲೆ ಕೇಂದ್ರದಿಂದ ಉಚಿತ ಅಣಬೆ ಬೇಸಾಯ ಮತ್ತು ಜೇನು ಸಾಕಾಣಿಕೆ ತರಬೇತಿ(Free mushroom training) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾಭ್ಯಾಸ ಅರ್ಧಕ್ಕೆ ಬಿಟ್ಟವರು ಮತ್ತು ತಮ್ಮದೇ ಸ್ವಂತಃ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯಿರುವವರು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.

ಎಲ್ಲಿ ಅರ್ಜಿ ಸಲ್ಲಿಸಬೇಕು? ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು? ಈ ಉಚಿತ ತರಬೇತಿ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು ಅರ್ಹ ಅಭ್ಯರ್ಥಿಗಳಿಗೆ ಈ ಮಾಹಿತಿ ತಿಳಿಯುವವರೆಗೆ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

ಇದನ್ನೂ ಓದಿ: IPPB Recruitment 2024: ಅಂಚೆ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ!

How can apply for this training- ಈ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?

  • ಈ ತರಬೇತಿಯಲ್ಲಿ ಭಾಗವಹಿಸಲು ಅಭ್ಯರ್ಥಿಯು ಗ್ರಾಮೀಣ ಭಾಗದವರಾಗಿರಬೇಕು ಇಂತವರಿಗೆ ಮೊದಲ ಅಭ್ಯತೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • 19 ರಿಂದ 44 ವರ್ಷದ ಒಳಗಿನವರಾಗಿರಬೇಕು.
  • ಬಿ.ಪಿ.ಎಲ್ ರೇಷನ್ ಕಾರ್ಡ ಹೊಂದಿರಬೇಕು.

Training date- ತರಬೇತಿ ಅವಧಿ:

ಉಚಿತ ಅಣಬೆ ಬೇಸಾಯ ಮತ್ತು ಜೇನು ಸಾಕಾಣಿಕೆ ತರಬೇತಿಯು ದಿನಾಂಕ: 25 ಮಾರ್ಚ 2024 ರಿಂದ ಪ್ರಾರಂಭವಾಗಲಿದ್ದು ಒಟ್ಟು 10 ದಿನ ಈ ತರಬೇತಿ ನಡೆಯಲಿದೆ.

ಇದನ್ನೂ ಓದಿ: Free CCTV installation training- ಉಚಿತ ಸಿಸಿಟಿವಿ ಅಳವಡಿಕೆ ತರಬೇತಿಗೆ ಅರ್ಜಿ ಆಹ್ವಾನ!

ತರಬೇತಿಯು ಸಂಪೂರ್ಣ ಉಚಿತ:

ಈ ತರಬೇತಿಯಲ್ಲಿ ಭಾಗವಹಿಸುವವರಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರಲಿದ್ದು ತರಬೇತಿಯು ಸಂಪೂರ್ಣ ಉಚಿತವಾಗಿದೆ.

Free mushroom Training application- ಎಲ್ಲಿ ಅರ್ಜಿ ಸಲ್ಲಿಸಬೇಕು?

ಆಸಕ್ತ ಅರ್ಹ ಅಭ್ಯರ್ಥಿಗಳು ಈ ಕೂಡಲೇ ತರಬೇತಿ ಪ್ರಾರಂಭವಾಗುವ ಮೊದಲು ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ 9743429595, 8105378735, 948195521, 9449371579, 9164411580 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಬೇಕು.

ಇದನ್ನೂ ಓದಿ: Court recruitment -2024 : PUC ಮತ್ತು SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ!

Required documents for application- ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

1) ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
2) ಕುಟುಂಬದ ರೇಶನ್ ಕಾರ್ಡ ಪ್ರತಿ.
3) ಪೋಟೋ-1
4) ಬ್ಯಾಂಕ್ ಪಾಸ್ ಬುಕ್ ಪ್ರತಿ.

mushroom Training place- ತರಬೇತಿ ನಡೆಯುವ ಸ್ಥಳ:

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ , ಹೊಳಲೂರು, ಶಿವಮೊಗ್ಗ ಜಿಲ್ಲೆ, ಹೊನ್ನಾಳಿ ರಸ್ತೆ, ಹೊಳಲೂರು- 577216

RUDSET- ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳ ಕುರಿತು ಹೆಚ್ಚಿನ ಮಾಹಿತಿ ಪಡೆಯಲು: Click here

ಇದನ್ನೂ ಓದಿ: Junior assistant recruitment-2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕಿರಿಯ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ!