Parihara amount-2024: ಕೇಂದ್ರದಿಂದ 3498 ಕೋಟಿ ಬರ ಪರಿಹಾರ ಬಿಡುಗಡೆ! ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ!

Facebook
Twitter
Telegram
WhatsApp

ಕೇಂದ್ರ ಸರಕಾರದಿಂದ ಎನ್.ಡಿ.ಆರ್.ಎಫ್(NDRF) ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರ್ವಹಣೆ ಮಾಡಲು 3498 ಕೋಟಿ ಹಣವನ್ನು(Parihara amount) ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಒಟ್ಟು 240 ತಾಲೂಕುಗಳಲ್ಲಿ 223 ತಾಲೂಕುಗಳು ಅತ್ಯಂತ ಭೀಕರ ಬರಗಾಲವನ್ನು ಎದುರುಸುತ್ತಿದ್ದು, ಈ ತಾಲೂಕಿನ ಜನರಿಗೆ ಅರ್ಥಿಕವಾಗಿ ಬೆಂಬಲ ನೀಡಲು ಈ ಹಣವನ್ನು ರಾಜ್ಯ ಸರಕಾರದಿಂದ ಬಳಕೆ ಮಾಡಿಕೊಳ್ಳಲಾಗುತ್ತದೆ.

ಈಗಾಗಲೇ ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರದ ಹಣವಾಗಿ ರೂ 2,000 ವನ್ನು ರೈತರ ಖಾತೆಗೆ ವರ್ಗಾವಣೆ ಮಾಡಲಾಗಿದ್ದು, ಇನ್ನು ಈಗ ಕೇಂದ್ರದಿಂದ ಹಣ ಬಿಡುಗಡೆ ಅಗಿರುವ ಕಾರಣ ಎರಡನೇ ಕಂತಿನ ಹಣವನ್ನು ಈ ಕೆಳಗೆ ತಿಳಿಸಿರುವ ಪಟ್ಟಿಯಲಿರುವ ರೈತರಿಗೆ ಸಂಬಂಧಪಟ್ಟ ಇಲಾಖೆಯಿಂದ ಬಿಡುಗಡೆ ಮಾಡಲಾಗುತ್ತದೆ.

ಇದನ್ನೂ ಓದಿ: Bara parihara list-2024: ಬರ ಪರಿಹಾರ ಹಣ ಬಿಡುಗಡೆಯಾದ ರೈತರ ಪಟ್ಟಿ ಬಿಡುಗಡೆ!

Bara Parihara Farmer list-ಈ ಪಟ್ಟಿಯಲ್ಲಿರುವ ರೈತರಿಗೆ ಸಿಗಲಿದೆ ಪರಿಹಾರದ ಹಣ! 

ಕೇಂದ್ರದಿಂದ ಪ್ರಸ್ತುತ ಬಿಡುಗಡೆಯಾಗಿರುವ ಪರಿಹಾರದ ಹಣ ಯಾವೆಲ್ಲ ರೈತರಿಗೆ ಸಿಗಲಿದೆ ಎಂದು ನಿಮ್ಮ ಮೊಬೈಲ್ ನಲ್ಲೇ ರೈತರು ತಿಳಿಯಬಹುದು.

Step-1: ಮೊದಲಿಗೆ ಈ parihara eligible list  ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಜಾಲತಾಣವನ್ನು ಪ್ರವೇಶ ಮಾಡಬೇಕು. ನಂತರದಲ್ಲಿ “Select year/ವರ್ಷ ಸೆಲೆಕ್ಟ್ ಮಾಡಿ”, Select season/ಋತು ಆಯ್ಕೆ ಮಾಡಿ, Calamity Type/ವಿಪತ್ತಿನ ವಿಧ ಮತ್ತು ನಿಮ್ಮ District/ಜಿಲ್ಲೆ, Taluk/ತಾಲ್ಲೂಕು, Hobli/ಹೋಬಳಿ,  ಮತ್ತು ನಿಮ್ಮ Village/ಗ್ರಾಮ/ಹಳ್ಳಿಯನ್ನು ಸೆಲೆಕ್ಟ್ ಮಾಡಿ “Get Report” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: “Get Report” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಇದಾದ ನಂತರ ಇಲ್ಲಿ “ಇನ್‌ಪುಟ್ ಸಬ್ಸಿಡಿ ಪರಿಹಾರ ಹಣ ಸಂದಾಯದ ವಿವರಗಳು/Payment Details” ಎಂದು ಗೋಚರಿಸುತ್ತದೆ ಇದರ ಕೆಳಗೆ ನಿಮ್ಮ ಹಳ್ಳಿಯಲ್ಲಿ ಯಾರಿಗೆಲ್ಲ ಮೊದಲ ಕಂತಿನ ರೂ 2,000 ಬರ ಪರಿಹಾರ ನೇರ ನಗದು ವರ್ಗಾವಣೆ(DBT) ಅಗಿದೆ ಎನ್ನುವ ರೈತರ ಪಟ್ಟಿಯನ್ನು ನೋಡಬಹುದು ಈ ಪಟ್ಟಿಯಲ್ಲಿರುವವರಿಗೆ ಎರಡನೇ ಕಂತಿನ ಬರ ಪರಿಹಾರದ ಹಣ ಜಮಾ ಅಗಲಿದೆ. ಒಂದೊಮ್ಮೆ ಪಟ್ಟಿಯಲ್ಲಿ ನಿಮ್ಮ ಹೆಸರು ಇರದಿದ್ದಲ್ಲಿ ನಿಮ್ಮ ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿಗಳನ್ನು ನೇರವಾಗಿ ಭೇಟಿ ಮಾಡಿ ಈ ಕುರಿತು ವಿಚಾರಣೆ ಮಾಡಿ ನಿಮ್ಮ ಅರ್ಜಿಯನ್ನು ಸರಿಪಡಿಸಿಕೊಳ್ಳಬೇಕು.

ಇದನ್ನೂ ಓದಿ: Bele parihara-2024: ಇಲ್ಲಿದೆ ಬೆಳೆ ಪರಿಹಾರದ ಹಣ ಜಮಾ ಅಗದ ರೈತರ ಪಟ್ಟಿ!

NDRF ಮಾರ್ಗಸೂಚಿ ಪ್ರಕಾರ ಪ್ರತಿ ಹೆಕ್ಟೇರ್‌ಗೆ(2.5 acre)ಬೆಳೆ ನಷ್ಟಕ್ಕೆ ಎಷ್ಟು ಪರಿಹಾರ ನಿಗಧಿಪಡಿಸಲಾಗಿದೆ?

ಶೇ 33ಕ್ಕಿಂತ ಹೆಚ್ಚು ಹಾನಿಯಾದ ವಿಸ್ತೀರ್ಣಕ್ಕೆ ಪ್ರತಿ ಹೆಕ್ಟೇರ್‌ಗೆ ನಿಗಧಿಪಡಿಸಿರುವ ಬರ ಪರಿಹಾರ ಹಣ ವಿವರ ಹೀಗಿದೆ:

(1) ಮಳೆಯಾಶ್ರಿತ ಬೆಳೆಗಳಿಗೆ- 8,500 ರೂ

(2) ನೀರಾವರಿ ಬೆಳೆಗಳಿಗೆ- 17,000 ರೂ

(3) ಬಹುವಾರ್ಷಿಕ ಬೆಳೆಗಳಿಗೆ- 22,500 ರೂ

2nd Installment parihara release date- 2ನೇ ಕಂತಿನ ಹಣ ಯಾವಾಗ ರೈತರ ಖಾತೆಗೆ ಬಿಡುಗಡೆ ಅಗಲಿದೆ?

ನಿನ್ನೆ ಅಂದರೆ ದಿನಾಂಕ 27-04-2024 ರಂದು ಕೇಂದ್ರದಿಂದ ರಾಜ್ಯಕ್ಕೆ ಎರಡನೇ ಕಂತಿನ ಬರ ಪರಿಹಾರದ ಹಣ ಜಮಾ ಅಗಿದ್ದು ಇನ್ನು ಚುನಾವಣ ಆಯೋಗವು ಪರಿಹಾರದ ಹಣವನ್ನು ರೈತರ ಖಾತೆಗೆ ಜಮಾ ಮಾಡಲು ಒಪ್ಪಿಗೆ ಸೂಚಿಸಿರುವ ಕಾರಣ ಇನ್ನು ಒಂದೆರಡು ವಾರದ ಒಳಗಾಗಿ ರೈತರ ಖಾತೆಗೆ ಎರಡನೇ ಕಂತಿನ ಬರ ಪರಿಹಾರ ಜಮಾ ಅಗುವ ನಿರೀಕ್ಷೆಯಿದೆ.

ಇದನ್ನೂ ಓದಿ: DBT Payment status- ಆಧಾರ್ ಕಾರ್ಡ ನಂಬರ್ ಹಾಕಿ ಯಾವ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎಂದು ತಿಳಿಯಿರಿ!

₹ 18171.44 CR was the relief sought as per SDRF rules for Karnataka drought relief.
Central Government has only sanctioned ₹ 3498 CR.
That is less than 20% of the relief funds we had asked for.
One of the worst droughts, 223 out of 240 Talukas under drought, and Karnataka… pic.twitter.com/DfQkLpjIdP — Krishna Byre Gowda (@krishnabgowda) April 27, 2024

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ