ಗ್ರಾಮೀಣ ಭಾಗದಲ್ಲಿ ವಾಸಿಸುವ ಸ್ವಂತ ಮನೆಯಿಂದ ನಾಗರಿಕರು ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ(PM Awas Yojana) ಮನೆಯನ್ನು ಪಡೆದುಕೊಳ್ಳಲು ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು ನಾಗರಿಕರಿಗೆ ಅವಕಾಶ ಮಾಡಿಕೊಡಲಾಗಿದ್ದು ಇದರ ಕುರಿತು ಒಂದಿಷ್ಟು ವಿವರವಾದ ಮಾಹಿತಿಯನ್ನು ಇಲ್ಲಿ ಪ್ರಕಟಿಸಲಾಗಿದೆ.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಇರುವ ವಸತಿ ರಹಿತರ ಹಾಗೂ ನಿವೇಶನ ರಹಿತರ ಸಮೀಕ್ಷೆ ರಾಜ್ಯದಲ್ಲಿ ಪ್ರಾರಂಭಿಸಲಾಗಿದ್ದು ಸರ್ವರಿಗೂ ಸೂರು ಒದಗಿಸಬೇಕೆಂಬ ಉದ್ದೇಶದಿಂದ ಈ ಸಮೀಕ್ಷೆಯನ್ನು ಆರಂಭಿಸಲಾಗಿದ್ದು ಅರ್ಹ ನಾಗರಿಕರು ಈ ಸಮೀಕ್ಷೆಯಲ್ಲಿ ಭಾಗವಹಿಸುವಂತೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Karmika Card-ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ 2 ಲಕ್ಷ ರೂ. ಸಿಗುವ ಹೊಸ ಯೋಜನೆ!
ಗ್ರಾಮೀಣ ಭಾಗದಲ್ಲಿ ಸ್ವಂತ ಮನೆಯನ್ನು ಹೊಂದಿಲ್ಲದವರು ಈ ಸುವರ್ಣಾವಕಾಶವನ್ನು(PM Awas Yojana survey) ಬಳಕೆ ಮಾಡಿಕೊಳ್ಳಬಹುದಾಗಿದ್ದು ತಮ್ಮ ಮೊಬೈಲ್ ನಲ್ಲೇ ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಹೇಗೆ? ಯಾರೆಲ್ಲ ಈ ಸಮೀಕ್ಷೆಯಲ್ಲಿ ಭಾಗವಹಿಸಬಹುದು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಅಂಕಣದಲ್ಲಿ ತಿಳಿಸಲಾಗಿದೆ.
Who can apply-ಸಮೀಕ್ಷೆಯಲ್ಲಿ ಭಾಗವಹಿಸಲು ಅರ್ಹತೆಗಳು:
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆಯನ್ನು ಹೊಂದಲು ಆರ್ಥಿಕ ನೇರವನ್ನು ಪಡೆಯಲು ಸಮೀಕ್ಷೆಯಲ್ಲಿ ಭಾಗವಹಿಸಲು ಈ ಕೆಳಗಿನ ಅರ್ಹತೆಯನ್ನು ಹೊಂದಿರುವ ಫಲಾನುಭವಿಗಳು ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
1) ವಸತಿ ರಹಿತರು ಹಾಗೂ ನಿವೇಶನ ರಹಿತರು ಅಂದರೆ ಸ್ವಂತ ಮನೆಯನ್ನು ಹೊಂದಿಲ್ಲದೇ ಇರುವವರು ಇದರಲ್ಲಿ ಭಾಗವಹಿಸಬಹುದು.
2) ಕಚ್ಚಾ ಮನೆ ಹೊಂದಿರುವವರು/ತಾತ್ಕಾಲಿಕ ಮನೆಯನ್ನು ಹೊಂದಿರುವವರು.
3) ಕುಟುಂಬದ ಒಂದು ವರ್ಷದ ಆದಾಯ 1.80 ಲಕ್ಷ ಕ್ಕಿಂತ ಅಧಿಕ ಇಲ್ಲದೇ ಇರುವ ಅಭ್ಯರ್ಥಿಗಳು ಸಮೀಕ್ಷೆಯಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ: Mudra loan-2025: ಮುದ್ರಾ ಯೋಜನೆಯಡಿ 10 ಲಕ್ಷದವರೆಗೆ ಸಾಲ! ಅರ್ಜಿ ಸಲ್ಲಿಸುವುದು ಹೇಗೆ?

Documents For PM Awas Yojana survey-ಸಮೀಕ್ಷೆಯಲ್ಲಿ ಭಾಗವಹಿಸಲು ಅಗತ್ಯ ದಾಖಲಾತಿಗಳು:
ಅಭ್ಯರ್ಥಿಯ ಆಧಾರ್ ಕಾರ್ಡ್ ಪ್ರತಿ
ಆದಾಯ ಪ್ರಮಾಣ ಪತ್ರ
ಬ್ಯಾಂಕ್ ಪಾಸ್ ಬುಕ್ ಪ್ರತಿ
ನರೇಗಾ ಯೋಜನೆ ಜಾಬ್ ಕಾರ್ಡ್
ಇದನ್ನೂ ಓದಿ: E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!
How to Apply For PM-Awas Yojana Survey-ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಹೇಗೆ?
ವಿಧಾನ-1:
ನಿವೇಶನ ರಹಿತ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ಒಬ್ಬರಂತೆ ಸರ್ವೇಕ್ಷಕರನ್ನು/Surveyor ಅನ್ನು ನಿಯೋಜನೆ ಮಾಡಲಾಗಿದ್ದು ಇವರುಗಳು ನಿಮ್ಮ ಹಳ್ಳಿಗೆ ಸಮೀಕ್ಷೆಯನ್ನು ಮಾಡಲು ಬಂದಾಗ ನಿಮ್ಮ ಸ್ಥಳವನ್ನು ಭೇಟಿ ಮಾಡಲು ತಿಳಿಸಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಸಮೀಕ್ಷೆಯಲ್ಲಿ ನಿಮ್ಮ ಹೆಸರನ್ನು ಸೇರಿಸಬೇಕು.
Online Apply Method-ವಿಧಾನ-2: ನಿಮ್ಮ ಮೊಬೈಲ್ ಬಳಕೆ ಮಾಡಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು:
ಅರ್ಹ ನಾಗರಿಕರು ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿರುವ “AwaasPlus 2024” ಮೊಬೈಲ್ ಅಪ್ಲಿಕೇಶನ್ ಅನ್ನು ತಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಂಡು ಈ ಕೆಳಗೆ ವಿವರಿಸಿರುವ ಹಂತಗಳನ್ನು ಅನುಸರಿಸಿ ಸಮೀಕ್ಷೆಯಲ್ಲಿ ಭಾಗವಹಿಸಬಹುದು.
Step-1: ಮೊದಲಿಗೆ ಇಲ್ಲಿ ಕ್ಲಿಕ್ Download Now ಮಾಡಿ ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ “AwaasPlus 2024” ಮೊಬೈಲ್ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಬೇಕು.
ಇದನ್ನೂ ಓದಿ: Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Step-2: ಬಳಿಕ ಆಪ್ಲಿಕೇಶನ್ ಅನ್ನು ಒಪನ್ ಮಾಡಿಕೊಂಡು “Self Survey” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ ನಂಬರ್ ಅನ್ನು ನಮೂದಿಸಿ “AUTHENTICATE” ಬಟನ್ ಮೇಲೆ ಕ್ಲಿಕ್ ಮಾಡಬೇಕು.
Step-3: ಬಳಿಕ ಸಮೀಕ್ಷೆಯ ಅರ್ಜಿ ನಮೂನೆ ತೆರೆದುಕೊಳ್ಳುತ್ತದೆ ಇಲ್ಲಿ ಕೇಳುವ ಅಗತ್ಯ ವಿವರವನ್ನು ಭರ್ತಿ ಮಾಡಿ ಕೊನೆಯಲ್ಲಿ ನಿಮ್ಮ ಪ್ರಸ್ತುತ ನಿವೇಶನದ GPS ಪೋಟೋ ವನ್ನು ತೆಗೆದು ಕೊನೆಯಲ್ಲಿ Submit ಬಟನ್ ಮೇಲೆ ಕ್ಲಿಕ್ ಮಾಡಬೇಕು.
For More Information-ಹೆಚ್ಚಿನ ವಿವರಗಳನ್ನು ಪಡೆಯಲು:
ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್- Click here
ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವೆಬ್ಸೈಟ್-Click here