- Advertisment -
HomeBreaking NewsPM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ...

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ!

Last updated on February 18th, 2025 at 01:15 pm

ಕೇಂದ್ರ ಸರಕಾರದಿಂದ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(Kisan samman) ಯೋಜನೆಯ 19ನೇ ಕಂತಿನ ಹಣವನ್ನು(PM-Kisan 19th installment) ರೈತರ ಖಾತೆಗೆ ನೇರ ನಗದು ವರ್ಗಾವಣೆ(DBT) ಮೂಲಕ ಬಿಡುಗಡೆ ಮಾಡುವ ದಿನಾಂಕವನ್ನು ಕೇಂದ್ರ ಕೃಷಿ ಸಚಿವರು ಅಧಿಕೃತವಾಗಿ ಪ್ರಕಟಿಸಿದ್ದಾರೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan) ಒಂದು ವರ್ಷಕ್ಕೆ ಒಬ್ಬ ರೈತರ ಖಾತೆಗೆ ಪ್ರತಿ ನಾಲ್ಕು ತಿಂಗಳಿಗೊಮ್ಮೆ ತಲಾ 2,000 ರೂ ದಂತೆ ಒಟ್ಟು ಮೂರು ಕಂತುಗಳಲ್ಲಿ 6,000 ಸಾವಿರವನ್ನು ರೈತರ ಖಾತೆಗೆ ಈ ಯೋಜನೆಯಡಿ ಜಮಾ ಮಾಡಲಾಗುತ್ತದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ(PM-Kisan 19th installment Date) ಇಲ್ಲಿಯವರೆಗೆ ಒಟ್ಟು 18 ನೇ ಕಂತುಗಳ ಹಣವನ್ನು ಜಮಾ ಮಾಡಲಾಗಿದ್ದು ಪ್ರಸ್ತುತ ಈಗ 19 ನೇ ಕಂತಿನ ಅರ್ಥಿಕ ನೆರವಿನ ನಿರೀಕ್ಷೆಯಲ್ಲಿ ರೈತರು ಇದ್ದಾರೆ ಈ ಎಲ್ಲಾ ರೈತಾಪಿ ವರ್ಗದವರಿಗೆ ಕೇಂದ್ರ ಕೃಷಿ ಸಚಿವರು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಒಂದಿಷ್ಟು ಉಪಯುಕ್ತವಾದ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: KSOU Admission-ಮನೆಯಲ್ಲೇ ಕುಳಿತು ಓದಿ ಡಿಗ್ರಿ ಸೇರಿದಂತೆ ವಿವಿಧ ಪದವಿಗಳನ್ನು ಪಡೆಯಲು ಅವಕಾಶ!

ಈ ಲೇಖನದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ(Kisan samman nidhi yojane) ಹಣ ಯಾವ? ದಿನಾಂಕದಂದು ಜಮಾ ಅಗಲಿದೆ ಎನ್ನುವ ಮಾಹಿತಿಯ ಜೊತೆಗೆ ಈ ಯೋಜನೆಯ ಹಣ ಜಮಾ ವಿವರವನ್ನು ಮೊಬೈಲ್ ನಲ್ಲಿ ಹೇಗೆ ತಿಳಿಯುವುದು? 19ನೇ ಕಂತಿನ ಹಣವನ್ನು ಪಡೆಯಲು ಅರ್ಹ ಫಲಾನುಭವಿ ಪಟ್ಟಿಯನ್ನು ಪಡೆಯುವುದು ಹೇಗೆ? ಮೊಬೈಲ್ ನಲ್ಲೇ ಇ-ಕೆವೈಸಿ ಮಾಡಿಕೊಳ್ಳುವ ವಿಧಾನದ ಮಾಹಿತಿಯನ್ನು ಸಹ ತಿಳಿಸಲಾಗಿದೆ.

PM-Kisan 19th installment- ಈ ದಿನ ಪಿ ಎಂ ಕಿಸಾನ್ 19ನೇ ಕಂತಿನ ಹಣ ರೈತರ ಖಾತೆಗೆ:

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 24 ಫೆಬ್ರವರಿ 2025 ರಂದು ಬಿಹಾರ ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಕೃಷಿ/ರೈತರಿಗೆ ಸಂಬಂಧಪಟ್ಟ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು ಇದೇ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 19 ನೇ ಕಂತಿನ ಹಣವನ್ನು ಜಮಾ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೃಷಿ ಸಚಿವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Land registration-ಆಸ್ತಿ ನೋಂದಣಿ ಮಾಡಿಕೊಳ್ಳುವರಿಗೆ ಇಲ್ಲಿದೆ ನೂತನ ಮಾಹಿತಿ!

PM-kisan Benificiary List-19ನೇ ಕಂತಿನ ಹಣ ಪಡೆಯಲು ಅರ್ಹರಿರುವ ರೈತರ ಪಟ್ಟಿ ಬಿಡುಗಡೆ:

ಕೇಂದ್ರದ ಅಧಿಕೃತ ಪಿ ಎಂ ಕಿಸಾನ್ ಜಾಲತಾಣದಲ್ಲಿ ಈಗಾಗಲೇ ಈ ಯೋಜನೆಯಡಿ 19ನೇ ಕಂತಿನ ಹಣವನ್ನು ಪಡೆಯಲು ಅರ್ಹರಿರುವ ರೈತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು ಈ ಕೆಳಗೆ ತಿಳಿಸಿರುವ ವಿಧಾವನ್ನು ಅನುಸರಿಸಿ ರೈತರು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದಾಗಿದೆ.

Step-1: ಮೊಟ್ಟಮೊದಲಿಗೆ ಇಲ್ಲಿ ಕ್ಲಿಕ್ PM-kisan Benificiary List ಮಾಡಿ ಅಧಿಕೃತ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ತಂತ್ರಾಂಶವನ್ನು ಪ್ರವೇಶ ಮಾಡಬೇಕು.

Step-2: ಬಳಿಕ ಈ ಪೇಜ್ ನಲ್ಲಿ ಕೆಳಗೆ ಕಾಣುವ “Benificiary List” ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ರಾಜ್ಯ/ಜಿಲ್ಲೆ/ತಾಲ್ಲೂಕು/ಹಳ್ಳಿಯ ಹೆಸರನ್ನು ಆಯ್ಕೆ ಮಾಡಿಕೊಂಡು “Get Report” ಬಟನ್ ಮೇಲೆ ಕ್ಲಿಕ್ ಮಾಡಿದರೆ ಸಾಕು 19ನೇ ಕಂತಿನ ಹಣವನ್ನು ಪಡೆಯಲು ಅರ್ಹರಿರುವ ನಿಮ್ಮ ಹಳ್ಳಿಯ ಅರ್ಹ ರೈತರ ಪಟ್ಟಿಯನ್ನು ನೋಡಬಹುದು ಒಮ್ಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರಿದಿಯಾ ಎಂದು ಖಚಿತಪಡಿಸಿಕೊಳ್ಳಬೇಕು.

pmkisan list

ಇದನ್ನೂ ಓದಿ: e-swathu andolana-ಇ-ಸ್ವತ್ತು ಮಾಡಿಕೊಳ್ಳದವರಿಗೆ ಸಿಹಿ ಸುದ್ದಿ! ಇ-ಸ್ವತ್ತು ವಿತರಣಾ ಆಂದೋಲನ!

ಒಂದೊಮ್ಮೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದೇ ಇದ್ದಲ್ಲಿ ನಿಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರವನ್ನು ಭೇಟಿ ಮಾಡಿ ನಿಮ್ಮ ಅರ್ಜಿಯ ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬೇಕು.

Pmkisan status check-ಕಿಸಾನ್ ಸಮ್ಮಾನ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ಹಣ ಜಮಾ ವಿವರ ಪಡೆಯುವ ವಿಧಾನ:

ರೈತರು ತಮ್ಮ ಮೊಬೈಲ್ ನಲ್ಲಿ ಗೂಗಲ್ ಪ್ಲೇ ಸ್ಟೋರ್ ಪ್ರವೇಶ ಮಾಡಿ ಕೆಳಗೆ ತಿಳಿಸಿರುವ ಹಂತಗಳನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಕೇವಲ ಒಂದೆರಡು ಕ್ಲಿಕ್ ನಲ್ಲಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಎಷ್ಟು ಹಣ ಜಮಾ ಅಗಿದೆ ಎನ್ನುವ ಮಾಹಿತಿಯನ್ನು ಪಡೆಯಬಹುದಾಗಿದೆ.

Step-1: ಮೊಟ್ಟ ಮೊದಲಿಗೆ ಈ Pmkisan status check ಲಿಂಕ್ ಮೇಲೆ ಕ್ಲಿಕ್ ಮಾಡಿ ಗೂಗಲ್ ಪ್ಲೇ ಸ್ಟೋರ್ ಭೇಟಿ ಮಾಡಿ ಅಧಿಕೃತ PMKISAN GoI ಕಿಸಾನ್ ಸಮ್ಮಾನ್ ಮೊಬೈಲ್ ಅಪ್ಲಿಕೇಶನ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬೇಕು.

ಇದನ್ನೂ ಓದಿ: E-Khata Application: ಆಸ್ತಿ ನೋಂದಣಿ ಸಂಬಂಧಿಸಿದಂತೆ ಇ-ಖಾತಾದಲ್ಲಿ ಮಹತ್ವದ ಬದಲಾವಣೆ!

PM-Kisan (3)

Step-2: ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಂಡ ಬಳಿಕ ಲಾಗಿನ್ ಅಗಿ ಅರ್ಜಿದಾರರ ಆದಾರ್ ಕಾರ್ಡ ನಂಬರ್ ಅನ್ನು ನಮೂದಿಸಿ ನಿಮ್ಮ ಮೊಬೈಲ್ ನಂಬರ್ ಗೆ ಬರುವ OTP ಆನ್ನು ಹಾಕಿ ಈ ಅಪ್ಲಿಕೇಶನ್ ಗೆ ಲಾಗಿನ್ ಅಗಬೇಕು.

Step-3: Login ಅದ ಮೇಲೆ ಈ ಯೋಜನೆಯಡಿ ಜಮಾ ಅಗಿರುವ ಕಂತುಗಳವಾರು ಹಣದ ವಿವರವನ್ನು ಪಡೆಯಲು ಮುಖಪುಟದಲ್ಲಿ ಗೋಚರಿಸುವ “Beneficiary status” ಬಟನ್ ಮೇಲೆ ಕ್ಲಿಕ್ ಮಾಡಿ “installment” ಕಂತನ್ನು ಆಯ್ಕೆ ಮಾಡಿಕೊಂಡು ಈ ಯೋಜನೆಯಡಿ ಜಮಾ ಅದ ಹಣದ ವಿವರವನ್ನು ಕಂತುವಾರು ಪಡೆಯಬಹುದು.

- Advertisment -
LATEST ARTICLES

Related Articles

- Advertisment -

Most Popular

- Advertisment -