Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

Crop insurance
Facebook
Twitter
Telegram
WhatsApp

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ ಸಲ್ಲಿಸುವುದೇಗೆ? ಅಗತ್ಯ ದಾಖಲೆ ಮಾಹಿತಿ ಸೇರಿದಂತೆ ಇತರೆ ಉಪಯುಕ್ತ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸುವುದರಿಂದ ಬೆಳೆ ನಷ್ಟವಾದ ಸಮಯದಲ್ಲಿ ವಿಮಾ ಕಂಪನಿಯ(Crop Insurance) ಮೂಲಕ ನಷ್ಟ ಪರಿಹಾರವನ್ನು ಪಡೆಯಬಹುದಾಗಿದೆ.

ಇದನ್ನೂ ಓದಿ: Rabi MSP Price-ಕಡಲೆ,ಗೋಧಿ ಸೇರಿದಂತೆ ಒಟ್ಟು 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ ಮಾಡಿದ ಕೇಂದ್ರ ಸರಕಾರ!

ಹಿಂಗಾರು ಹಂಗಾಮಿನಲ್ಲಿ ಬೆಳೆದಿರುವ ಬೆಳೆಗಳಿಗೆ ವಿಮೆಯನ್ನು ಮಾಡಿಕೊಂಡರೆ ಮಳೆ ಕಡಿಮೆ/ಹೆಚ್ಚಾಗಿ ಬೆಳೆ ಹಾನಿಯಾದರೆ ಅಥವಾ ಇತರೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದರೆ ರೈತರು ಬೆಳೆ ವಿಮೆಯನ್ನು ಪಡೆಯಲು ಅರ್ಜಿಯನ್ನು ಸಲ್ಲಿಸಬಹುದು.

ನಿಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿ ನಿಮ್ಮ ಹಳ್ಳಿಯಲ್ಲಿ ಯಾವ ಬೆಳೆಗೆ? ವಿಮೆಯನ್ನು ಮಾಡಿಕೊಳ್ಳಬಹುದು ಎಂದು?

ರಾಜ್ಯ ಸರಕಾರದಿಂದ ಎಲ್ಲಾ ಜಿಲ್ಲೆಯ ಬೆಳೆ ವಿಮೆ ಅರ್ಜಿ ವಿಲೇವಾರಿಗೆ ಮತ್ತು ಬೆಳೆ ವಿಮೆ ಯೋಜನೆಯಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳಲು ಬೆಳೆ ವಿಮೆ ಸಂಬಂದಪಟ್ಟ ಎಲ್ಲಾ ಮಾಹಿತಿಯನ್ನು www.samrakshane.karnataka.gov.in ವೆಬ್ಸೈಟ್ ನಲ್ಲಿ ಮಾಹಿತಿಯನ್ನು ಪ್ರಕಟಿಸಲಾಗುತ್ತದೆ.

ರೈತರು ತಮ್ಮ ಮೊಬೈಲ್ ನಲ್ಲಿ ಈ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ನಿಮ್ಮ ಹಳ್ಳಿಯಲ್ಲಿ ಯಾವ ಬೆಳೆಗೆ? ವಿಮೆಯನ್ನು ಮಾಡಿಕೊಳ್ಳಬಹುದು ಎಂದು? ತ್ವರಿತವಾಗ್ಗಿ ಚೆಕ್ ಮಾಡಿಕೊಳ್ಳಬಹುದು.

ಇದನ್ನೂ ಓದಿ: South tour package- ರಾಜ್ಯ ಸರಕಾರದಿಂದ 6 ದಿನದ ದಕ್ಷಿಣ ಭಾರತ ಪ್ರವಾಸಕ್ಕೆ ರೂ 15,000/- ಸಾವಿರ ಸಹಾಯಧನ!

Step-1: ಮೊದಲು ಇಲ್ಲಿ ಒತ್ತಿ Crop insurance crop details ಅಧಿಕೃತ ಬೆಳೆ ವಿಮೆ ವೆಬ್ಸೈಟ್ ಅನ್ನು ಭೇಟಿ ಮಾಡಬೇಕು.

Step-2: ಈ ಪೇಜ್ ನಲ್ಲಿ ಮೊದಲಿಗೆ “ಋತು ಆಯ್ಕೆ / Select Insurance Season” ಆಯ್ಕೆಯಲ್ಲಿ “Rabi” ಎಂದು ಆಯ್ಕೆ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಿ ಮುಂದುವರೆಯಬೇಕು.

Crop insurance

Step-3: ಇದಾದ ಬಳಿಕ ಇಲ್ಲಿ ಮುಖಪುಟದಲ್ಲಿ ಕೆಳಗೆ ಕಾಣುವ “Crop You can insure” ಎಂದು ತೋರಿಸುವ ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ತದನಂತರ ಇಲ್ಲಿ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ, ಹಳ್ಳಿ ಹೆಸರನ್ನು ಆಯ್ಕೆ ಮಾಡಿಕೊಂಡು “Display” ಬಟನ್ ಮೇಲೆ ಕ್ಲಿಕ್ ಮಾಡಿದರೆ ನೀವು ಯಾವ ಬೆಳೆಗೆ ಬೆಳೆ ವಿಮೆಯನ್ನು ಮಾಡಿಸಬಹುದು ಎನ್ನುವ ಬೆಳೆ ವಿವರ ಮತ್ತು ಬೆಳೆ ವಿಮೆ ಹಣದ(Sum Insured) ವಿವರ ತೋರಿಸುತ್ತದೆ.

ಇದನ್ನೂ ಓದಿ: Google Pay, Phone pe ನಲ್ಲಿ ತಪ್ಪಾಗಿ ಬೇರೆಯವರಿಗೆ ಹಣ ಕಳಿಸಿದರೆ! ವಾಪಸ್ ಪಡೆಯುವುದು ಹೇಗೆ!

Crop insurance application last date-ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ರೈತರು ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದು ತಮ್ಮ ಮೊಬೈಲ್ ನಲ್ಲೇ ಚೆಕ್ ಮಾಡಿಕೊಳ್ಳಬಹುದು. ಇದು ಹೇಗೆ ಎಂದು ಕೆಳಗಿನ ಹಂತಗಳಲ್ಲಿ ತಿಳಿಸಲಾಗಿದೆ.

Step-1: ಮೊದಲು ಇಲ್ಲಿ ಕ್ಲಿಕ್ Click here ಮಾಡಿ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು.

Step-2: ಇಲ್ಲಿ “ಋತು ಆಯ್ಕೆ / Select Insurance Season” ಆಯ್ಕೆಯಲ್ಲಿ “Rabi” ಎಂದು ಕ್ಲಿಕ್ ಮಾಡಿಕೊಂಡು “ಮುಂದೆ/Go” ಬಟನ್ ಮೇಲೆ ಕ್ಲಿಕ್ ಮಾಡಬೇಕು.

bele vime

Step-3: ಇಲ್ಲಿ “Farmers” ಕಾಲಂ ನಲ್ಲಿ ಕೆಳಗೆ ಕಾಣುವ “View cut off dates” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: “View cut off dates” ಬಟನ್ ಮೇಲೆ ಕ್ಲಿಕ್ ಮಾಡಿದ ಬಳಿಕ ಈ ಪೇಜ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡರೆ “Enrolment Close Date” ಕಾಲಂ ನಲ್ಲಿ ಬೆಳೆ ವಿಮೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ತೋರಿಸುತ್ತದೆ.

ಇದನ್ನೂ ಓದಿ: Car loan Subsidy-ಸರಕು ಅಥವಾ ಯೆಲ್ಲೋ ಬೋರ್ಡ್ ವಾಹನ ಖರೀದಿಸಲು 4 ಲಕ್ಷ ಸಬ್ಸಿಡಿ ಪಡೆಯಲು ಅರ್ಜಿ!

ಬೆಳೆ ವಿಮೆಯನ್ನು ಮಾಡಿಸಲು ಎಲ್ಲಿ ಅರ್ಜಿ ಸಲ್ಲಿಸಬೇಕು?

ರೈತರು ತಮ್ಮ ಬೆಳೆಗಳಿಗೆ ಬೆಳೆ ವಿಮೆಯನ್ನು ಮಾಡಿಸಲು ನಿಮ್ಮ ಹತ್ತಿರದ ಗ್ರಾಮ್ ಒನ್ ಕೇಂದ್ರವನ್ನು ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ದಾಖಲೆಗಳು:

ಅರ್ಜಿದಾರರ ಆಧಾರ್ ಕಾರ್ಡ
ಬ್ಯಾಂಕ್ ಪಾಸ್ ಬುಕ್ ಪ್ರತಿ
ಪಹಣಿ/RTC/ಉತಾರ್
FID ನಂಬರ್
ಮೊಬೈಲ್ ನಂಬರ್

Facebook
Twitter
Telegram
WhatsApp
Picture of siddesh

siddesh

Leave a Comment

Top Stories

land documents

agricultural land documents: ಜಮೀನನ್ನು ಖರೀದಿ ಮಾಡುವ ಮುನ್ನ ಯಾವೆಲ್ಲಾ ದಾಖಲೆಗಳನ್ನು ಚೆಕ್ ಮಾಡಬೇಕು?

ಕೃಷಿ ಭೂಮಿ ಖರೀದಿಸುವ ಮುಂಚೆ ಯಾವ ಯಾವ ದಾಖಲೆಗಳನ್ನು ಮುಖ್ಯವಾಗಿ ಚೆಕ್ ಮಾಡಬೇಕು ಮತ್ತು ಯಾವೆಲ್ಲ ಮಾಹಿತಿಯನ್ನು ಪರೀಶೀಲನೆ ಮಾಡಬೇಕು? ಎಂದು ಈ ಅಂಕಣದಲ್ಲಿ ವಿವರಿಸಲಾಗಿದೆ. ಒಂದೊಮ್ಮೆ ನೀವು ಖರೀದಿ ಮಾಡುತ್ತಿರುವ ಜಮೀನಿನ ದಾಖಲೆಗಳು

sarakri yojane

sarakri yojane- ಸಂಚಾರಿ ಮಾರಾಟ ಮಳಿಗೆ ಖರೀದಿಗೆ ರೂ 5.00 ಲಕ್ಷ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಡಾ ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದಿಂದ ವಿವಿಧ ಯೋಜನೆಯಡಿ ಸಬ್ಸಿಡಿಯ ಪ್ರಯೋಜನ ಪಡೆದುಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 30-10-2024 ಕೊನೆಯ ದಿನಾಂಕವಾಗಿದೆ. ಕುಶಲಕಮಿಗಳ ಅಭಿವೃದ್ದಿಗೆ

Crop insurance

Rabi Crop Insurance-ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನ!

ಪ್ರಸ್ತುತ ರಾಜ್ಯದಲ್ಲಿ ಮುಂಗಾರು ಹಂಗಾಮು ಮುಕ್ತಾಯವಾಗಿ ಹಿಂಗಾರು ಹಂಗಾಮು ಆರಂಭವಾಗುತ್ತಿದ್ದು ರೈತರು ತಮ್ಮ ಬೆಳೆಗಳಿಗೆ ವಿಮೆಯನ್ನು(Rabi Crop Insurance) ಮಾಡಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಮ್ಮ ಹಳ್ಳಿ ವ್ಯಾಪ್ತಿಯಲ್ಲಿ ಯಾವೆಲ್ಲ ಬೆಳೆಗಳಿಗೆ ವಿಮೆಯನ್ನು ಮಾಡಿಸಬಹುದು? ಅರ್ಜಿ