- Advertisment -
HomeAgricultureRain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

Rain Forecast-ಕರ್ನಾಟಕ ಮಳೆ ಮುನ್ಸೂಚನೆ! ಜಿಲ್ಲಾವಾರು ತಾಪಮಾನ ಎಷ್ಟಿದೆ?

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕ ತಾಪಮಾನ/ಉಷ್ಣಾಂಶದ ಪ್ರಭಾವದಿಂದ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ದಿಂದ-ಮಧ್ಯಮ ದವರೆಗೆ ಮಳೆಯಾಗುತ್ತಿದ್ದು(Rain Forecast)ಈ ಹವಾಮಾಣ ಪರಿಸ್ಥಿತಿಯು ಇದೇ ರೀತಿಯಲ್ಲಿ ರಾಜ್ಯದಲ್ಲಿ ಮುಂದುವರೆಯುವ ಲಕ್ಷಣಗಳು ಇವೆ ಎಂದು ಹವಾಮಾಣ ಇಲಾಖೆಯಿಂದ ಮುನ್ಸೂಚನೆಯನ್ನು ನೀಡಲಾಗಿದೆ.

ಈ ಅಂಕಣದಲ್ಲಿ ಮುಂದಿನ 5 ದಿನದ ಮಳೆ ಮುನ್ಸೂಚನೆ(Next 5 Days Weather News) ಮತ್ತು ಕರಾವಳಿ, ಮಲೆನಾಡು, ಒಳನಾಡು ಜಿಲ್ಲೆಗಳಲ್ಲಿನ ಮಳೆ ಮುನ್ಸೂಚನೆಯ ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದ್ದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ ನಮ್ಮ ಪುಟವನ್ನು ಬೆಂಬಲಿಸಿ.

ಇದನ್ನೂ ಓದಿ: Ration Card List-2025: ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ!

ಇದಲ್ಲದೇ ರೈತರು ತಮ್ಮ ಗ್ರಾಮದ ಮಳೆ ಮುನ್ಸೂಚನೆ(Karnataka Rain forecast) ಮಾಹಿತಿಯನ್ನು ಯಾವೆಲ್ಲ ಮಾರ್ಗಗಳನ್ನು ಅನುಸರಿಸಿ ತಿಳಿದುಕೊಳ್ಳಬಹುದು ಎನ್ನುವ ಮಾಹಿತಿಯನ್ನು ಸಹ ತಿಳಿಸಲಾಗಿದ್ದು ನಿಖರ ಮಳೆ ಮುನ್ಸೂಚನೆಯನ್ನು ಹೇಗೆ ಪಡೆಯಬಹುದು? ಇದಕ್ಕಾಗಿ ಯಾವೆಲ್ಲ ಮೂಲಗಳು ಪ್ರಸ್ತುತ ಚಾಲ್ತಿಯಲ್ಲಿವೆ ಎನ್ನುವ ಮಾಹಿತಿಯನ್ನು ಈ ಕೆಳಗೆ ಹಂಚಿಕೊಳ್ಳಲಾಗಿದೆ.

Next 5 Days Karnataka Weather- ಮುಂದಿನ 5 ದಿನಗಳ ಮಳೆ ಮುನ್ಸೂಚನೆ:

ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ(Bengaluru Weather)ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯಿಂದ ಮಳೆ ಮುನ್ಸೂಚನೆ ನೀಡಲಾಗಿದೆ.

Karnataka Tomorrow Wather-ನಾಳೆ(15 ಏಪ್ರಿಲ್ 2025) ಬೆಳಿಗ್ಗೆ 8-00 ಗಂಟೆವರೆಗಿನ ಕರ್ನಾಟಕದ ಮಳೆ ಮುನ್ಸೂಚನೆ ಮಾಹಿತಿ:

ರಾಜ್ಯದ ನಕ್ಷೆಯ ವಿಭಾಗವಾರು ಈ ಕೆಳಗೆ ಕರಾವಳಿ, ಮಲೆನಾಡು, ಒಳನಾಡು ಜಿಲ್ಲೆಗಳಲ್ಲಿನ ಮಳೆ ಮುನ್ಸೂಚನೆ ಮಾಹಿತಿಯನ್ನು ಸಂಕ್ಷೀಪ್ತವಾಗಿ ಇಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: BBPM Schemes-ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ!

rain forecast

ಕರಾವಳಿ ಜಿಲ್ಲೆಗಳಲ್ಲಿ:

ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ಕೆಳಗಿನ ಪ್ರದೇಶಗಳಲ್ಲಿ ಅಲ್ಲಲ್ಲಿ ಹಾಗೂ ಕೇರಳ ಗಡಿ ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಇಲ್ಲಿ ಗಾಳಿಯ ಪಾತ್ರ ಮಹತ್ವದ್ದಾಗಿದೆ.

ಗಾಳಿಯ ಒತ್ತಡ ಹೆಚ್ಚಿದ್ದರೆ ಇತರ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಗಡಿ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ಉಳಿದ ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿ ಜಿಲ್ಲೆಗಳಲ್ಲಿ ಎಪ್ರಿಲ್ 19ರ ತನಕ ಮಳೆಯ ಪ್ರಮಾಣ ತುಂಬಾ ಕಡಿಮೆಯಾಗುವ ಲಕ್ಷಣಗಳಿವೆ.

ಇದನ್ನೂ ಓದಿ: Gig Workers Bill-ಗಿಗ್ ಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ! ಇಲ್ಲಿದೆ ಸಂಪೂರ್ಣ ವಿವರ!

ಮಲೆನಾಡು ಜಿಲ್ಲೆಗಳಲ್ಲಿ:

ಕೊಡಗು ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಹಾಸನ ಅಲ್ಲಲ್ಲಿ ಮೋಡದ ವಾತಾವರಣ ಹಾಗೂ ಸಕ್ಲೇಶ್ಪುರ ಸುತ್ತಮುತ್ತ ತುಂತುರು ಮಳೆಯ ಸಾಧ್ಯತೆಗಳದ್ದು, ಚಿಕ್ಕಮಗಳೂರಿನ ಶಿೃಂಗೇರಿ, ಕುದುರೆಮುಖ, ಆಗುಂಬೆ ಸುತ್ತಮುತ್ತ ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಶಿವಮೊಗ್ಗ ಜಿಲ್ಲೆಯ ಅಲ್ಲಲ್ಲಿ ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆ ಇದೆ ಈಗಿನಂತೆ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಇದನ್ನೂ ಓದಿ: Mobile Repair Training-ಉಚಿತ ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ!

ಒಳನಾಡು ಜಿಲ್ಲೆಗಳಲ್ಲಿ:

ಉತ್ತರ ಒಳನಾಡಿನ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದ್ದು, ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಬೆಂಗಳೂರು ದಕ್ಷಿಣ ಹಾಗೂ ಕೋಲಾರ ಜಿಲ್ಲೆಗಳ ಅಲ್ಲಲ್ಲಿ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಎಪ್ರಿಲ್ 21ರಿಂದ ಉತ್ತರ ಒಳನಾಡಿನಲ್ಲೂ ಮಳೆಯ ಮುನ್ಸೂಚನೆ ಇದೆ.

Varuna Mitra Helplnine- ಈ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಮಳೆ ಮುನ್ಸೂಚನೆ ಮಾಹಿತಿ ಪಡೆಯಿರಿ:

ಕರ್ನಾಟಕ ರಾಜ್ಯ ಸರ್ಕಾರದಿಂದ ರೈತರ ಅನುಕೂಲಕ್ಕಾಗಿ ತಮ್ಮ ಗ್ರಾಮದ ಮಳೆ ಮುನ್ಸೂಚನೆ ಮಾಹಿತಿಯನ್ನು ನಿಖರವಾಗಿ ಕೇವಲ ಒಂದೆರಡು ನಿಮಿಷದಲ್ಲಿ ಮಳೆ ಮಾಹಿತಿಯನ್ನು ನಿಮ್ಮ ಮನೆಯಲ್ಲೇ ಕುಳಿತು ಶೀಘ್ರವಾಗಿ ತಿಳಿದುಕೊಳ್ಳಬದಾಗಿದೆ.

ಇದಕ್ಕಾಗಿ ರೈತರು ಈ “ವರುಣ ಮಿತ್ರ- 9243345433” ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರು ಮತ್ತು ಜಿಲ್ಲೆ,ತಾಲ್ಲೂಕು, ಗ್ರಾಮದ ಹೆಸರನ್ನು ಹೇಳಿದರೆ ಸಾಕು ನಿಮ್ಮ ಗ್ರಾಮದ ಮಳೆ ಮುನ್ಸೂಚನೆ ಮಾಹಿತಿಯನ್ನು ತಿಳಿದುಕೊಳ್ಳಬಹುದು.

District Wise Temperature- ಜಿಲ್ಲಾವಾರು ತಾಪಮಾನ ವಿವರ:

District Wise Temperature
- Advertisment -
LATEST ARTICLES

Related Articles

- Advertisment -

Most Popular

- Advertisment -