- Advertisment -
HomeGovt SchemesRation Angadi-ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Ration Angadi-ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ! ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಪಡಿತರ ಚೀಟಿದಾರರ ಆಧಾರದ ಮೇಲೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನೂತನ ನ್ಯಾಯಬೆಲೆ ಅಂಗಡಿಗಳನ್ನು(Ration Angadi) ತೆರೆಯಲು ಅರ್ಜಿಯನ್ನು ಆಹ್ವಾನಿಸಲಾಗಿದ್ದು ಅರ್ಹ ಅಭ್ಯರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದು.

ರಾಜ್ಯ ಮತ್ತು ಕೇಂದ್ರ ಸರಕಾರದ ಸಹಯೋಗದಲ್ಲಿ ಆಹಾರ ಭದ್ರತಾ ಕಾಯ್ದೆಯಡಿ ದೇಶದ ಎಲ್ಲಾ ನಾಗರಿಕರಿಗೆ ಆಹಾರ ದಾನ್ಯಗಳನ್ನು ಒದಗಿಸಲು ಅರ್ಹ ಫಲಾನುಭವಿಗಳನ್ನು ಗುರುತಿಸುವ ಸಲುವಾಗಿ ರೇಶನ್ ಕಾರ್ಡಗಳನ್ನು(Ration Card) ವಿತರಣೆ ಮಾಡಲಾಗಿದ್ದು ರೇಶನ್ ಕಾರ್ಡ ಒಂದಿರುವ ಗ್ರಾಹಕರಿಗೆ ಪ್ರತಿ ತಿಂಗಳು ಆಹಾರ ದಾನ್ಯಗಳನ್ನು ನೀಡಲು ರಾಜ್ಯಾದ್ಯಂತ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲಾಗಿದೆ.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆವತಿಯಿಂದ(Ahara Ilake) ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕೆಲವು ಜಿಲ್ಲೆಗಳಲ್ಲಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು ಯಾರ‍ೆಲ್ಲ ಸಲ್ಲಿಸಬಹುದು? ನ್ಯಾಯಬೆಲೆ ಅಂಗಡಿಯನ್ನು ನಡೆಸುವ ಪ್ರತಿನಿಧಿಗೆ ಎಷ್ಟು? ಹಣ ಪಾವತಿ ಮಾಡಲಾಗುತ್ತದೆ? ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳೇನು? ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.

ಇದನ್ನೂ ಓದಿ: Revenue Department-ರಾಜ್ಯ ಸರಕಾರದಿಂದ ಕಂದಾಯ ಇಲಾಖೆಯ ಪರಿಶೀಲನಾ ಸಭೆಯಲ್ಲಿ ಮಹತ್ವದ ನಿರ್ಣಯ!

New ration shop application-ಯಾರೆಲ್ಲ ಅರ್ಜಿ ಸಲ್ಲಿಸಲು ಅವಕಾಶವಿದೆ?

  • ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.
  • ಆದಿವಾಸಿ, ನೇಕಾರ, ಮಹಿಳಾ, ಅಂಗವಿಕಲ ವಿಕಲಚೇತನರು ಸೇರಿದಂತೆ ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ, ಸಂಸ್ಥೆ, ಗ್ರಾಮ ಹಾಗೂ ಸ್ಥಳೀಯ ಪಂಚಾಯಿತಿಗಳು, ಕೃಷಿ ಪತ್ತಿನ ಸಂಘ, ತೋಟಗಾರಿಕೆ, ಪ್ರಾಥಮಿಕ ಬಳಕೆದಾರರು, ವಿವಿಧ ಸಹಕಾರಿ ಸಂಘಗಳು, ಸ್ತ್ರೀ ಶಕ್ತಿ ಹಾಗೂ ಮಹಿಳಾ ಸ್ವಸಹಾಯ ಗುಂಪುಗಳಿಗೂ ಸಹ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಅರ್ಜಿ ಸಲ್ಲಿಸಲು ಸಹಕಾರಿ ಸಂಘಗಳು ಕನಿಷ್ಠ 3 ವರ್ಷದ ಹಿಂದೆ ನೋಂದಾಯಿತರಾಗಿರಬೇಕು ಮತ್ತು ಕನಿಷ್ಠ ₹2,00,000 ಲಕ್ಷರೂಪಾಯಿಗಳ ಬ್ಯಾಂಕ್ ಮೊತ್ತ ಬ್ಯಾಲೆನ್ಸ್ ಹೊಂದಿರಬೇಕು. 
  • ತೃತೀಯ ಲಿಂಗಿಗಳು ಸಹ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
  • ಸ್ತ್ರೀ ಸಹಾಯ ಸಂಘಗಳು ₹1,00,000 ಲಕ್ಷ ಹಾಗೂ ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ಕನಿಷ್ಠ ₹50,000 ಸಾವಿರ ಬ್ಯಾಂಕ್ ಠೇವಣಿ ಹೊಂದಿರಬೇಕು.

ಇದನ್ನೂ ಓದಿ: Education Assistance-ವಿದ್ಯಾರ್ಥಿಗಳಿಗೆ ₹20 ಸಾವಿರದ ವರೆಗೆ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಆಹ್ವಾನ!

Ration Angadi

Required Documents For New Ration Shop- ಯಾವೆಲ್ಲ ದಾಖಲಾತಿಗಳನ್ನು ಸಲ್ಲಿಸಬೇಕಾಗುತ್ತದೆ?

1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ

2) ಬ್ಯಾಂಕ್ ಪಾಸ್ ಬುಕ್ ಪ್ರತಿ

3) ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕಡ್ಡಾಯವಾಗಿ ಹತ್ತನೇ ತರಗತಿ ಪಾಸಾಗಿರಬೇಕು. (ವಿಕಲಚೇತನರು ಹಾಗೂ ತೃತೀಯ ಲಿಂಗಿಗಳು ಮಾತ್ರ)

4) ಸಹಕಾರ ಸಂಘ, ಸಂಸ್ಥೆಗಳ ಮತ್ತು ಸ್ವಸಹಾಯ ಸಂಘಗಳಾದರೆ ನೋಂದಾವಣೆ ಪತ್ರ, ಸಹಕಾರ ಸಂಘ ಸಂಸ್ಥೆಯಾದರೆ ಕಳೆದ 3 ವರ್ಷಗಳ ದೃಢೀಕೃತ ಲೆಕ್ಕ ಪರಿಶೋಧನಾ ವರದಿ, ಬೈಲಾ, ಪ್ರತನಿಧಿ ನೇಮಕ ನಿರ್ಣಯ, ಅರ್ಜಿ ಸಲ್ಲಿಸಿದ ಸಹಕಾರಿ ಸಂಘದ ಮೇಲೆ ಯಾವುದೆ ವಿಚಾರಣೆ, ಲಿಕ್ವಿಡೇಷನ್ ನಡವಳಿ ನಡೆದಿರುವುದಿಲ್ಲ ಎಂಬ ಬಗ್ಗೆ ಸಕ್ಷಮ ಪ್ರಾಧಿಕಾರಿಯು ನೀಡಿರುವ ದೃಢೀಕರಣ ಪತ್ರ,

ಇದನ್ನೂ ಓದಿ: Free Bus Pass-ಈ ವರ್ಗದರಿಗೆ ಉಚಿತ ಬಸ್ ಪಾಸ್ ಪಡೆಯಲು ಅರ್ಜಿ ಆಹ್ವಾನ!

5) ವ್ಯಾಪಾರದ ಮಳಿಗೆಯ ಖಾತೆ ಅಥವಾ ಬಾಡಿಗೆ ಕರಾರು ಪತ್ರ,

6) ಹಣಕಾಸು ಹೊಂದಿರುವ ಬಗ್ಗೆ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ,

7) ಸಹಕಾರ ಸಂಘದವರು ಅಧಿಕೃತವಾಗಿ ನೇಮಿಸಿರುವ ಪ್ರತಿನಿಧಿಯ ಇತ್ತೀಚಿನ 3 ಭಾವಚಿತ್ರ,

8) ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಪ್ರಕರಣಗಳು ಹೊಂದಿಲ್ಲದಿರುವ ಬಗ್ಗೆ ಪೋಲಿಸ್ ಇಲಾಖೆಯಿಂದ ಪೋಲಿಸ್ ವೆರಿಪಿಕೇಷನ್ ರಿಪೋರ್ಟ್‍ನ್ನು ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: VA Selection List- 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ!

How To Apply for New Ration Shop-ಅರ್ಜಿ ಸಲ್ಲಿಸುವುದು ಹೇಗೆ?

ಅರ್ಹ ಅರ್ಜಿದಾರರು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ತಾಲ್ಲೂಕಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ನಮೂನೆ-ಎ ಅರ್ಜಿ ನಮೂನೆಯನ್ನು ಪಡೆದು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ನಿಮ್ಮ ಜಿಲ್ಲೆಯ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯನ್ನು ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬೇಕು.

ನ್ಯಾಯಬೆಲೆ ಅಂಗಡಿಯ ಪ್ರತಿನಿಧಿ ಎಷ್ಟು ಹಣ ಪಾವತಿಸಲಾಗುತ್ತದೆ?

ಅರ್ಜಿ ಸಲ್ಲಿಸಿ ಆಯ್ಕೆಯಾದ ನ್ಯಾಯಬೆಲೆ ಅಂಗಡಿಯನ್ನು ಆರಂಭಿಸುವ ಪ್ರತಿನಿಧಿಗೆ ತಿಂಗಳಿಗೆ ಇಂತಿಷ್ಟು ಹಣವನ್ನು ಪಾವತಿ ಮಾಡುವುದರ ಜೊತೆಗೆ ಆ ಭಾಗದಲ್ಲಿರುವ ಪಡಿತರ ಚೀಟಿದಾರರ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಗೌರವ ಧನವನ್ನು ಇಲಾಖೆಯಿಂದ ನೀಡಲಾಗುತ್ತದೆ.

Food Deparment website-ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆಯ ಜಾಲತಾಣ- CLICK HERE

- Advertisment -
LATEST ARTICLES

Related Articles

- Advertisment -

Most Popular

- Advertisment -