New ration card application date- ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಆಹ್ವಾನ!

New ration card application date: ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ(Ration card) ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಚುನಾವಣೆ ಮುಗಿದ ಬಳಿಕ ಇದೇ ಮೊದಲ ಬಾರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ಹೊಸ ಪಡಿತರ ಚೀಟಿ(Ration card) ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಯಾರೆಲ್ಲ ಹೊಸ ಪಡಿತರ ಚೀಟಿ ಪಡೆಯಲು ಅರ್ಜಿ ಸಲ್ಲಿಸಬವುದು? ಯಾವ ದಿನದಂದು ಅರ್ಜಿ ಹಾಕಲು ಅವಕಾಶ ನೀಡಲಾಗಿದೆ? ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು ಯಾವುವು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ.

ದಿನನಿತ್ಯ ಈ ರೀತಿಯ ಉಪಯುಕ್ತ ಮಾಹಿತಿ ಪಡೆಯಲು ಇಲ್ಲಿ ಕ್ಲಿಕ್> WhatsApp channel ಮಾಡಿ ಕೃಷಿಕಮಿತ್ರ ವಾಟ್ಸಾಪ್ ಚಾನೆಲ್ ಸೇರಿಕೊಳ್ಳಿ.

ನೂತನ ಸರಕಾರ ಆಡಳಿತಕ್ಕೆ ಬಂದ ಬಳಿಕ ಗ್ಯಾರಂಟಿ ಯೋಜನೆ ಜಾರಿ ಮಾಡಿದರಿಂದ ಪಡಿತರ ಚೀಟಿಗೆ ಹೆಚ್ಚು ಪ್ರಮುಖ್ಯತೆ ಬಂದಿದ್ದು ಇಲ್ಲಿಯವರೆಗೆ ಪಡಿತರ ಚೀಟಿ ಹೊಂದಲು ಅರ್ಹರಿದ್ದು ರೇಷನ್ ಕಾರ್ಡ ಪಡೆಯದವರು ಹೊಸದಾಗಿ ಅರ್ಜಿ ಸಲ್ಲಿಸಿ ಪಡಿತರ ಚೀಟಿ ಪಡೆಯಲು ರಾಜ್ಯ ಸರಕಾರದಿಂದ ಅವಕಾಶ ಮಾಡಿಕೊಡಲಾಗಿದೆ.

ಇದನ್ನೂ ಓದಿ: MSP ragi rate-2023: ಬೆಂಬಲ ಬೆಲೆಯಲ್ಲಿ ರಾಗಿ ಮಾರಾಟಕ್ಕೆ ಈ ವರ್ಗದ ರೈತರಿಗೂ ಅವಕಾಶ! ಬೆಲೆ ಪ್ರತಿ ಕ್ವಿಂಟಾಲ್ ಗೆ 3846 ರೂ.

New ration card application date-ಒಂದು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ!

ಅರ್ಹ ಅರ್ಜಿದಾರರು ಆನ್ಲೈನ್ ಮೂಲಕ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿ ಹಾಕುವುದಕ್ಕೆ 03 ಡಿಸೆಂಬರ್ 2023 ರಂದು ಬೆಳಗ್ಗೆ11-00 ರಿಂದ ಮಧ್ಯಾಹ್ನ 2 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಸಮಯದಲೇ ಎಲ್ಲಾ ಅರ್ಹ ಅರ್ಜಿದಾರರು ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ಇದನ್ನೂ ಓದಿ: Irrigation Facility Subsidy: ನೀರಾವರಿ ಸೌಲಭ್ಯಕ್ಕೆ 75,000/- ರೂ. ಸಹಾಯಧನಕ್ಕೆ ಅರ್ಜಿ ಆಹ್ವಾನ

ration card application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಗ್ರಾಮ ಒನ್, ಕರ್ನಾಟಕ ಒನ್, ಬೆಂಗಲೂರು ಒನ್ ಕೇಂದ್ರಗಳನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕಾಗುತ್ತದೆ ನಿಗದಿಪಡಿಸಿರುವ ಸಮಯದಲ್ಲಿ ಎಲ್ಲಾ ಭಾಗದ ನಾಗರಿಕರು ಅರ್ಜಿ ಸಲ್ಲಿಸಬೇಕಾಗಿರುವುದರಿಂದ ಈ ಬಾರಿಯು ಸರ್ವರ್ ಸಮಸ್ಯೆ ಬರಬವುದು ಅದರು ಒಮ್ಮೆ ಪ್ರಯತ್ನಿಸಿ ಹೆಚ್ಚಿನ ಸಂಖ್ಯೆಯ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಲು ಅಗದಿದ್ದಲ್ಲಿ ಮತ್ತೊಮ್ಮೆ ಇಲಾಖೆಯಿಂದ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬವುದು.

ಈ ಮೇಲಿನ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು ಇದನ್ನು ಹೊರತುಪಡಿಸಿ ಇತರೆ ಯಾವುದೇ ಕಂಪ್ಯೂಟರ್ ಸೆಂಟರ್ ಗಳಲ್ಲಿ/ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಇದನ್ನೂ ಓದಿ: Bara Parihara-2023: ರಾಜ್ಯ ಸರಕಾರದಿಂದ ಮೊದಲ ಕಂತಿನ ಬರ ಪರಿಹಾರ! ರೈತರಿಗೆ ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

(1) ನಗರ ಪ್ರದೇಶದಲ್ಲಿರುವವರು ವಾಸವಿರುವ ನಗರಸಭೆ/ಪುರಸಭೆ/ನಗರ ಪಾಲಿಕೆಯ ವಾರ್ಡ್ ಸಂಖ್ಯೆ, ಗ್ರಾಮದ ಹೆಸರು.
(2 )ಮನೆಯ ವಿದ್ಯುತ್ ಬಿಲ್/ಕರೆಂಟ್ ಬಿಲ್
(3) ಕುಟುಂಬದ ಸದಸ್ಯರ ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
(4) ಮೊಬೈಲ್ ನಂಬರ್
(5)ನಿವಾಸದ ಪೂರ್ಣ ವಿಳಾಸ , ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ

ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿರಬೇಕು 6 ವರ್ಷ ಮೇಲ್ಪಟ್ಟವರಿಗೆ ಪ್ರಸಕ್ತ ಸಾಲಿನ ಜಾತಿ ಪ್ರಮಾಣಪತ್ರ ಅದು ಐದು ವರ್ಷಕ್ಕಿಂತ ಒಳಗೆ ಇರುವಂತ ದಾಖಲೆಗಳನ್ನು ನೀಡಬೇಕಾಗುತ್ತದೆ.

ಇನ್ನು ಹೆಚ್ಚಿನ ಮಾಹಿತಿಗಾಗಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ವೆಬ್ಸೈಟ್ ಭೇಟಿ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ಇದನ್ನೂ ಓದಿ: Nigamada Yojane-ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ ಸೇರಿ ಇತರೆ ಎಲ್ಲಾ ಯೋಜನೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ!