HomeGovt SchemesRation card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ...

Ration card tiddupadi-ಪಡಿತರ ಚೀಟಿ ತಿದ್ದುಪಡಿಗೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ!

Last updated on December 21st, 2024 at 07:47 am

ಪಡಿತರ ಚೀಟಿ/ರೇಷನ್ ಕಾರ್ಡ ನಲ್ಲಿ ತಪ್ಪಾಗಿ ದಾಖಲಾಗಿರುವ ಮಾಹಿತಿಯನ್ನು ಅಥವಾ ವಿಳಾಸ ಮತ್ತು ಸದಸ್ಯರ ವಿವರವನ್ನು ತಿದ್ದುಪಡಿ(Ration card tiddupadi)/ಬದಲಾವಣೆ ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ.

ಆಹಾರ ಇಲಾಖೆಯಿಂದ ಪ್ರತಿ ತಿಂಗಳು ಸರಿಯಾಗಿ ಉಚಿತವಾಗಿ ಆಹಾರ ಧಾನ್ಯಗಳಾದ ಅಕ್ಕಿ, ರಾಗಿ ಇತರರೆ ಉತ್ಪನ್ನಗಳನ್ನು ನ್ಯಾಯಬೆಲೆ ಅಂಗಡಿಗಳಿಂದ(Ration card correction) ಪಡೆಯಲು ಗ್ರಾಹಕರ ವಿವರವು ರೇಷನ್ ಕಾರ್ಡ/ಪಡಿತರ ಚೀಟಿಯಲ್ಲಿ ಸರಿಯಾಗಿ ದಾಖಲಾಗಿರುವುದು ಕಡ್ಡಾಯವಾಗಿರುವ ಕಾರಣ ತಪ್ಪಾದ ವಿವರ ಹೊಂದಿರುವ ಸಾರ್ವಜನಿಕರು ತಮ್ಮ ವಿವರವನ್ನು ಸರಿಪಡಿಸಿಕೊಳ್ಳಲು ಇಲಾಖೆಯಿಂದ ಅವಕಾಶ ನೀಡಲಾಗಿದೆ.

ಇದನ್ನೂ ಓದಿ: KMF Milk Subsidy-ಹಾಲಿನ ಪ್ರೋತ್ಸಾಹಧನ ಬಿಡುಗಡೆ! ನಿಮ್ಮ ಖಾತೆಗೆ ಹಣ ಜಮಾ ಆಗಿದೆಯೇ ಚೆಕ್ ಮಾಡಿ?

ಪಡಿತರ ಚೀಟಿ ತಿದ್ದುಪಡಿಗೆ ಎಲ್ಲಿ ಅರ್ಜಿ(Ration card correction application) ಸಲ್ಲಿಸಬೇಕು? ಅರ್ಜಿ ಸಲ್ಲಿಸಲು ಒದಗಿಸಬೇಕಾದ ದಾಖಲಾತಿಗಳೇನು? ಅರ್ಜಿ ಸಲ್ಲಿಸಲು ಎಷ್ಟು ದಿನ ಕಾಲಾವಕಾಶ ನೀಡಲಾಗಿದೆ? ಇತ್ಯಾದಿ ಸಂಪೂರ್ಣ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

How to apply for ration card correction-ರೇಷನ್ ಕಾರ್ಡ ತಿದ್ದುಪಡಿಗೆ ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಗ್ರಾಹಕರು ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿಕೊಂಡು ನಿಮ್ಮ ಹಳ್ಳಿಗೆ ಹತ್ತಿರವಿರುವ ಗ್ರಾಮ ಒನ್ ಕೇಂದ್ರವನ್ನು ಬೆಳಿಗ್ಗೆ 10-00 ಯಿಂದ ಸಂಜೆ 5-00 ಗಂಟೆಯವರೆಗೆ ನೇರವಾಗಿ ಭೇಟಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

ಇದನ್ನೂ ಓದಿ: Best Insurance Plan-2024: ಸಾರ್ವಜನಿಕರಿಗೆ ಭರ್ಜರಿ ಆಫರ್! ಕೇವಲ ₹599ರೂಗೆ ₹5 ಲಕ್ಷ ವಿಮೆ ಪಡೆಯಲು ಅರ್ಜಿ!

Ration card tiddupadi

ಇದನ್ನೂ ಓದಿ: Snake bite-ಹಾವು ಕಚ್ಚಿದಾಗ ಯಾವ ಕ್ರಮ ಅನುಸರಿಸಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ!

Last Date-ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ:

ಅರ್ಹ ಅರ್ಜಿದಾರರು ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಲು 31 ಡಿಸೆಂಬರ್ 2024 ಕೊನೆಯ ದಿನಾಂಕವಾಗಿರುತ್ತದೆ.

Required Documents for ration card correction application-ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

(1) ಅರ್ಜಿದಾರರ ಆಧಾರ್ ಕಾರ್ಡ ಪ್ರತಿ
(2) ರೇಷನ್ ಕಾರ್ಡ ಪ್ರತಿ
(3) ಖುದ್ದು ರೇಶನ್ ಕಾರ್ಡ ಸದಸ್ಯರು ಹಾಜರು ಇರಬೇಕು
(4) ಮೊಬೈಲ್ ನಂಬರ್

ಇದನ್ನೂ ಓದಿ: Digital Ration Card-ಅಧಿಕೃತ ರೇಶನ್ ಕಾರ್ಡ ಡೌನ್ಲೋಡ್ ಮಾಡಿಕೊಳ್ಳಲು ಅಪ್ಲಿಕೇಶನ್ ಬಿಡುಗಡೆ!

Ration card tiddupadi application-ಯಾವೆಲ್ಲ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ?

(1) ರೇಷನ್ ಕಾರ್ಡಗೆ ಹೊಸ ಸದಸ್ಯರ ಸೇರ್ಪಡೆ ಮಾಡಲು ಅವಕಾಶ ನೀಡಲಾಗಿದೆ.
(2) ಹೆಸರು ತೆಗೆಯುವುದಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
(3) ವಿಳಾಸ ಬದಲಾವಣೆಗೆ ಅರ್ಜಿ ಸಲ್ಲಿಸಬಹುದು.
(4) ನ್ಯಾಯಬೆಲೆ ಅಂಗಡಿ ಬದಲಾವಣೆಗೂ ಸಹ ಅರ್ಜಿ ಸಲ್ಲಿಸಬಹುದು.
(5) ರೇಷನ್ ಕಾರ್ಡ ಇ-ಕೆವೈಸಿ ಮಾಡಲು ಸಹ ಅವಕಾಶ ನೀಡಲಾಗಿದೆ.

Ration card tiddupadi arji status check- ಆನ್ಲೈನ್ ಮೂಲಕ ರೇಷನ್ ಕಾರ್ಡ ತಿದ್ದುಪಡಿ ಸ್ಟೇಟಸ್ ಚೆಕ್ ಮಾಡಲು ಅವಕಾಶವಿರುತ್ತದೆ:

ಒಮ್ಮೆ ರೇಷನ್ ಕಾರ್ಡ ತಿದ್ದುಪಡಿಗೆ ಗ್ರಾಮ ಒನ್ ಕೇಂದ್ರವನ್ನು ಭೇಟಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ಈ ಕೆಳಗೆ ನೀಡಿರುವ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ರೇಷನ್ ಕಾರ್ಡ ಹೊಂದಿರುವ ಗ್ರಾಹಕರು ತಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಯಾವ ಹಂತದಲ್ಲಿದೆ ಎನ್ನುವ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಆನ್ಲೈನ್ ಮೂಲಕ ರೇಷನ್ ಕಾರ್ಡ ತಿದ್ದುಪಡಿ ಅರ್ಜಿ ಸ್ಥಿತಿ ಚೆಕ್ ಮಾಡಲು ವೆಬ್ಸೈಟ್ ಲಿಂಕ್- Ration card tiddupadi arji status check

LATEST ARTICLES

Related Articles

Most Popular