RTC aadhar link-2024: ರೈತರ ಜಮೀನುಗಳಿಗೆ ಆಧಾರ್ ಲಿಂಕ್!

Facebook
Twitter
Telegram
WhatsApp

ಜುಲೈ ತಿಂಗಳ ಅಂತ್ಯದ ಒಳಗಾಗಿ ಕಂದಾಯ ಇಲಾಖೆಯಿಂದ ರೈತರ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್(RTC aadhar link-2024) ಮಾಡಲು ಯೋಜನೆಯನ್ನು ರೂಪಿಸಲಾಗಿದ್ದು, ರೈತರು ಈ ಅಂಕಣದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ಓದಿಕೊಂಡು ತಮ್ಮ ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳಬಹುದು.

ರೈತರು ತಮ್ಮ ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಎಲ್ಲಿ ಮಾಡಿಸಬೇಕು? ಬೇಕಾಗುವ ದಾಖಲೆಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ.

ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಯಲು ಜಮೀನುಗಳಿಗೆ ಆಧಾರ್ ಕಾರ್ಡ ಲಿಂಕ್: ಸಚಿವ ಕೃಷ್ಣ ಬೈರೇಗೌಡ

“ಯಾರದೋ ಜಮೀನನ್ನು ಮತ್ತೊಬ್ಬರು ಲಪಟಾಯಿಸುವುದನ್ನು ತಡೆಯಲು, ಬೆಳೆ ನಷ್ಟ ಮತ್ತಿತರ ಸಂದರ್ಭಗಳಲ್ಲಿ ದೊರೆಯುವ ಪರಿಹಾರವನ್ನು ಮತ್ತೊಬ್ಬರು ಪಡೆದು ದುರ್ಬಳಕೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜ್ಯದಲ್ಲಿನ ಎಲ್ಲ ಆಸ್ತಿಗಳಿಗೆ ಆಧಾರ್‌ಲಿಂಕ್‌ಮಾಡುವ ಪ್ರಕ್ರಿಯೆ ಜುಲೈ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಇದನ್ನೂ ಓದಿ: labour department application-ಕಾರ್ಮಿಕ ಇಲಾಖೆಯಿಂದ ವಿವಿಧ ಯೋಜನೆಗೆ ಅರ್ಜಿ ಸಲ್ಲಿಸಲು ವೆಬ್ಸೈಟ್ ಲಿಂಕ್ ಬಿಡುಗಡೆ!

RTC Aadhar link-ಪಹಣಿ/ಉತಾರ್ ಗೆ ಆಧಾರ್ ಕಾರ್ಡ ಲಿಂಕ್ ಎಲ್ಲಿ ಮಾಡಿಸಬೇಕು?

ರೈತರು ತಮ್ಮ ಜಮೀನಿಗಳ ಎಲ್ಲಾ ಸರ್ವೆ ನಂಬರಿನ ಎಲ್ಲಾ ಪಹಣಿ/RTC/ಉತಾರ್ ಗಳು ಮತ್ತು ನಿಮ್ಮ ಆಧಾರ್ ಕಾರ್ಡ ಪ್ರತಿ, ಆಧಾರ್ ಗೆ ಲಿಂಕ್ ಇರುವ ಮೊಬೈಲ್ ಪೋನ್ ಅನ್ನು ತೆಗೆದುಕೊಂಡು ನಿಮ್ಮ ಗ್ರಾಮ/ಹಳ್ಳಿಯ ಗ್ರಾಮ ಲೆಕ್ಕಾಧಿಕಾರಿ/VA ಅವರನ್ನು ಭೇಟಿ ಮಾಡಿ ಪಹಣಿಗೆ ಆಧಾರ್ ಲಿಂಕ್ ಮಾಡಿಕೊಳ್ಳಬಹುದು.

ಅಥವಾ ಇದಲ್ಲದೇ ನಿಮ್ಮ ಹೋಬಳಿಯ ನಾಡಕಚೇರಿಯನ್ನು ಮೇಲೆ ತಿಳಿಸಿರುವ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಹೋಗಿಯು ಸಹ ಪಹಣಿ/RTC ಗೆ ಆಧಾರ್ ಕಾರ್ಡ ಲಿಂಕ್ ಮಾಡಿಕೊಳ್ಳಬಹುದು.

How to link rtc and adhar card-: ತಮ್ಮ ಮೊಬೈಲ್ ನಲ್ಲೇ RTC ಗೆ ಆಧಾರ್ ಲಿಂಕ್ ಮಾಡಬಹುದು?

ರೈತರು ಈ ಕೆಳಗೆ ನೀಡಿರುವ ಕಂದಾಯ ಇಲಾಖೆಯ ಅಧಿಕೃತ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ತಮ್ಮ ಮೊಬೈಲ್ ನಲ್ಲೇ ಆನ್ಲೈನ್ ಮೂಲಕ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅನ್ನು ಮಾಡಬಹುದು.

Step-1: ಮೊದಲಿಗೆ ಈ RTC adhar card link status ಲಿಂಕ್ ಮೇಲೆ ಕ್ಲಿಕ್ ಮಾಡಿ ಕಂದಾಯ ಇಲಾಖೆಯ ಭೂಮಿ ಜಾಲತಾಣವನ್ನು ಭೇಟಿ ಮಾಡಬೇಕು. ಬಳಿಕ ಜಮೀನು ಯಾರ ಹೆಸರಿಗೆ ಇರುತ್ತದೆಯೋ ಅವರ ಮೊಬೈಲ್ ನಂಬರ್ ಅನ್ನು ಹಾಕಿ ಅಲ್ಲೇ ಕೆಳಗೆ ಕಾಣುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ “SEND OTP” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

ತದನಂತರ ನೀವು ಹಾಕಿರುವ ಮೊಬೈಲ್ ನಂಬರ್ ಗೆ ಬಂದಿರುವ 6 ಅಂಕಿಯ ಒಟಿಪಿ ಅನ್ನು ನಮೂದಿಸಿ “LOGIN” ಆಯ್ಕೆಯ ಮೇಲೆ ಕ್ಲಿಕ್ ಮಾಡಬೇಕು.

Step-2: ಮೇಲಿನ ವಿಧಾನವನ್ನು ಅನುಸರಿಸಿ ಲಾಗಿನ್ ಅದ ಬಳಿಕ ಅರ್ಜಿದಾರರ ಆಧಾರ್ ಕಾರ್ಡ ಸಂಖ್ಯೆಯನ್ನು ಮತ್ತು ಆಧಾರ್ ಕಾರ್ಡನಲ್ಲಿರುವಂತೆ ಹೆಸರನ್ನು ಭರ್ತಿ ಮಾಡಿ “Verify” ಎಂದು ಕಾಣುಸುವ ಬಟನ್ ಮೇಲೆ ಕ್ಲಿಕ್ ಮಾಡಿದರೆ “ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ” ಎಂದು ಗೋಚರಿಸುತ್ತದೆ ಇದಕ್ಕೆ “OK” ಎಂದು ಕ್ಲಿಕ್ ಮಾಡಿಬೇಕು.

ಇದನ್ನೂ ಓದಿ: SSC CGL Recruitment 2024-SSC ಯಿಂದ 17000 ಕ್ಕಿಂತ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ!ಅರ್ಜಿ ಸಲ್ಲಿಕೆ ಆರಂಭ!

Step-3: ಈ ಮೇಲಿನ ಹಂತವನ್ನು ಮುಗಿಸಿದ ಬಳಿಕ ಅಲ್ಲೇ ಕೆಳಗೆ ಗೋಚರಿಸುವ “ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ” ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಮತ್ತೊಮ್ಮೆ ಅರ್ಜಿದಾರರ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ OTP ಬಟನ್ ಮೇಲೆ ಟಿಕ್ ಮಾಡಿ ಒಟಿಪಿ ಪಡೆಯಿರಿ/Generate OTP ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ “ಸಲ್ಲಿಸು/Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-4: ಈ ಪೇಜ್ ನ ಮುಖಪುಟದ ಎಡಬದಿಯಲ್ಲಿ ಕಾಣುವ “ಲಿಂಕ್ ಆಧಾರ್/Link Aadhar” ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಕೆಳಗಡೆ ಕಾಣುವ ನಿಮ್ಮ ಸರ್ವೆ ನಂಬರ್ ಒಂದೊಂದನ್ನು ಟಿಕ್ ಮಾಡಿಕೊಂಡು ಅದರ ಮುಂದೆ ಕಾಣುವ “Link” ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ಮತ್ತೆ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ “Verify OTP” ಬಟನ್ ಮೇಲೆ ಕ್ಲಿಕ್ ಮಾಡಬೇಕು ಅಗ “ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ?/ Do you want to link your Aadhaar with the RTC?” ಎಂದು ಪ್ರಶ್ನೆ ತೋರಿಸುತ್ತದೆ ಅದಕ್ಕೆ ಹೌದು/Yes ಎಂದು ಕ್ಲಿಕ್ ಮಾಡಿದರೆ ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ/Survey No. already linked” ಎನ್ನುವ ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಅಗಿದೆ ಎಂದು ನೀವು ತಿಳಿದುಕೊಳ್ಳಬೇಕು.

ಇದನ್ನೂ ಓದಿ: Parihara status-ನಿಮ್ಮ ಸರ್ವೆ ನಂಬರ್ ಹಾಕಿ ಬರ ಪರಿಹಾರ ಎಷ್ಟು ಬಂದಿದೆ ಎಂದು ತಿಳಿಯಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡುವ ವಿಧಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ: Click here

ಯಾವೆಲ್ಲ ಸೌಲಭ್ಯ ಪಡೆಯಲು ಪಹಣಿಗೆ ಅಧಾರ್ ಲಿಂಕ್ ಮಾಡುವುದು ಕಡ್ಡಾಯ:

1) ಕೃಷಿ ಇಲಾಖೆಯಿಂದ ಸಹಾಯಧನದಲ್ಲಿ ಬಿತ್ತನೆ ಬೀಜ ಪಡೆಯಲು.
2) ಬರ ಪರಿಹಾರ, ಬೆಳೆ ನಷ್ಟ ಪರಿಹಾರ, ಬೆಳೆ ವಿಮೆ ಪರಿಹಾರ ಇತರೆ ಬಗ್ಗೆಯ ಹಾನಿ ಪರಿಹಾರಗಳನ್ನು ಪಡೆಯಲು.
3) ಸಹಾಯಧನದಲ್ಲಿ ಕೃಷಿ ಯಂತ್ರೋಪಕರಣ ಪಡೆಯಲು ಪಹಣಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ.
ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಅರಣ್ಯ, ರೇಷ್ಮೆ ಇಲಾಖೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸಹಾಯಧನ ಯೋಜನೆಗಳ ಸೌಲಭ್ಯ ಪಡೆಯಲು RTC ಗೆ ಆಧಾರ್ ಲಿಂಕ್ ಮಾಡಿಸುವುದು ಕಡ್ಡಾಯವಾಗಿದೆ.

ಇದನ್ನೂ ಓದಿ: karnataka dam water level:ಕರ್ನಾಟಕ ಜಲಾಶಯಗಳ ಇಂದಿನ ನೀರಿನ ಮಟ್ಟ ಮತ್ತು ಸಂಗ್ರಹಣೆ ಮತ್ತು ಒಳ ಮತ್ತು ಹೊರ ಹರಿವು ಮಾಹಿತಿ!

Facebook
Twitter
Telegram
WhatsApp
Picture of siddesh

siddesh

Leave a Comment

Top Stories

Ganga Kalyana aplication

Ganga Kalyana- ಕೊಳವೆ ಬಾವಿ ಕೊರೆಸಲು 4.25 ಲಕ್ಷ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!

ರೈತರು ತಮ್ಮ ಜಮೀನಿನಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ(Ganga Kalyana)ಕೊಳವೆ ಬಾವಿಯನ್ನು ಕೊರೆಸಲು 3.75 ಲಕ್ಷ ಸಹಾಯಧನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸುವ ವಿಧಾನ ಯಾವುದು? ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?(Ganga

best mileage bikes

Best mileage bikes-ಅತಿ ಹೆಚ್ಚು ಮೈಲೇಜ್ ಕೊಡುವ ಬೈಕ್ ಗಳು!ಫುಲ್ ಟ್ಯಾಂಕ್ ಮಾಡಿದರೆ 700-750 km ಓಡಿಸಬಹುದು!

ಪ್ರಸ್ತುತ ಪೆಟ್ರೋಲ್(petrol) ಬೆಲೆಯು ದಿನೇ ದಿನೇ ಏರುಗತಿಯಲ್ಲಿ ಸಾಗುತ್ತಿದ್ದು ಮಧ್ಯಮ ವರ್ಗದ ಜನರು ಕೆಲಸಕ್ಕೆ ತೆರಳಲು ಮತ್ತು ರೈತರು ಸಹ ತಮ್ಮ ದೈನಂದಿನ(best mileage bikes) ಚಟುವಟಿಕೆಗಳನ್ನು ಮಾಡಲು ದ್ವಿಚಕ್ರ ವಾಹನಗಳನ್ನು ಖರೀದಿ ಮಾಡಲು