How to link rtc to aadhar- ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ!

ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಅನ್ನು  ಜೋಡಣೆ ಮಾಡಲು ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಬಿಡುಗಡೆ ಮಾಡಲಾಗಿದೆ.

ಜಮೀನು ಹೊಂದಿರುವ ಸಾರ್ವಜನಿಕರು ಕಂದಾಯ ಇಲಾಖೆಯಿ ಈ ಅಧಿಕೃತ ವೆಬ್ಸೈಟ್ ಅನ್ನು ತಮ್ಮ ಮೊಬೈಲ್ ಬಳಕೆ ಮಾಡಿಕೊಂಡು  ಭೇಟಿ ಮಾಡಿ ಮನೆಯಲ್ಲೇ ಕುಳಿತುಕೊಂಡು ನಿಮ್ಮ ಜಮೀನಿನ ಪಹಣಿಗೆ(RTC/ಊತಾರ್) ಆಧಾರ್ ಕಾರ್ಡ ಅನ್ನು ಲಿಂಕ್ ಮಾಡಬಹುದು.

ನಿಮಗೆಲ್ಲ ತಿಳಿದಿರುವ ಹಾಗೆಯೇ ಕಂದಾಯ ಇಲಾಖೆಯಿಂದ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಮಾಡುವುದು ಕಡ್ದಾಯಗೊಳಿಸಲಾಗಿದೆ ಅದ್ದರಿಂದ ಸಾರ್ವಜನಿಕರು ಈ ಕೆಳಗೆ ತಿಳಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಮೊಬೈಲ್ ನಲ್ಲೇ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡಬಹುದು.

ಇದನ್ನೂ ಓದಿ: PM-Surya Ghar yojana- ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆ ಅರ್ಜಿ ಆಹ್ವಾನ! ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನದ ವಿವರ.

How to link rtc to aadhar- ಮೊಬೈಲ್ ನಲ್ಲಿ ಪಹಣಿಗೆ ಆಧಾರ್ ಕಾರ್ಡ ಜೋಡಣೆ ಮಾಡುವುದು ಹೇಗೆ?

ಸಾರ್ವಜನಿಕರು ಕಂದಾಯ ಇಲಾಖೆಯ  ಅಧಿಕೃತ ಭೂಮಿ ವೆಬ್ಸೈಟ್ ಅನ್ನು ಪ್ರವೇಶ ಮಾಡಿ ಈ ಕೆಳಗೆ ವಿವರಿಸಿರುವ ವಿಧಾನವನ್ನು ಅನುಸರಿಸಿ ನಿಮ್ಮ ಪಹಣಿ(RTC)ಗೆ ಆಧಾರ್‌ ಕಾರ್ಡಾ ಅನ್ನು ಜೋಡಣೆಯನ್ನು ಮಾಡಬಹುದು. 

Step-1: ಪ್ರಥಮದಲ್ಲಿ ಈ RTC aadhar link ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ಭೂಮಿ ವೆಬ್ಸೈಟ್ ಅನ್ನು ಪ್ರವೇಶ ಮಾಡಬೇಕು. ತದನಂತರ ನಿಮ್ಮ ಮೊಬೈಲ್ ನಂಬರ್ ಅನ್ನು ನಮೂದಿಸಿ ಕೆಳಗಿನ ಕಾಲಂ ನಲ್ಲಿ ಕಾಣುವ ಕ್ಯಾಪ್ಚ್ ಕೋಡ್ ಅನ್ನು ಹಾಕಿ “SEND OTP” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-2: ಇದಾದ ಬಳಿಕ ನೀವು ನಮೂದಿಸಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ “Login” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-3: ತದನಂತರ ಇಲ್ಲಿ ಜಮೀನು ಯಾರ ಹೆಸರಿಗೆ ಇದಿಯೋ ಅವರ ಆಧಾರ್ ಸಂಖ್ಯೆಯನ್ನು ಮತ್ತು ಅಧಾರ್ ನಲ್ಲಿರುವಂತೆಯೇ ಹೆಸರನ್ನು ಹಾಕಿ ಹಾಕಿ “Verify” ಬಟನ್ ಮೇಲೆ ಕ್ಲಿಕ್ ಮಾಡಿದರೆ ಆಧಾರ್ ಅನ್ನು ಯಶಸ್ವಿಯಾಗಿ ಪರಿಶೀಲಿಸಲಾಗಿದೆ(Aadhaar verified Succesfully) ಎಂದು ತೋರಿಸುತ್ತದೆ ನಂತರ “Ok” ಎಂದು ಕ್ಲಿಕ್ ಮಾಡಬೇಕು.

ಇದನ್ನೂ ಓದಿ: RTC adhar link- ಪಹಣಿ/RTC ಮತ್ತು ಆಧಾರ್ ಜೋಡಣೆಗೆ ಕಂದಾಯ ಇಲಾಖೆಯಿಂದ ನೂತನ ಕ್ರಮ: ಸಚಿವ ಕೃಷ್ಣಬೈರೇಗೌಡ.

Step-4: ಮೇಲಿನ ವಿಧಾನ ಮುಗಿಸಿದ ಬಳಿಕ ಅಲ್ಲೇ ಕೆಳಗೆ ಕಾಣುವ “ಆಧಾರ್ ಪರಿಶೀಲನೆಯನ್ನು ಬಳಸಿಕೊಂಡು ಅರ್ಜಿದಾರರ ವಿವರಗಳನ್ನು ಭರ್ತಿ ಮಾಡಿ” ಎನ್ನುವ ಬಟನ್ ಮೇಲೆ ಕ್ಲಿಕ್ ಮಾಡಿ ಇಲ್ಲಿ ಮತ್ತೊಮ್ಮೆ ಅರ್ಜಿದಾರರ ಆಧಾರ್ ಕಾರ್ಡ ನಂಬರ್ ಅನ್ನು ಹಾಕಿ OTP ಬಟನ್ ಮೇಲೆ ಟಿಕ್ ಮಾಡಿ ಒಟಿಪಿ ಪಡೆಯಿರಿ/Generate OTP ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಆಧಾರ್ ಕಾರ್ಡ ನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನ್ನು ಹಾಕಿ “ಸಲ್ಲಿಸು/Submit” ಬಟನ್ ಮೇಲೆ ಕ್ಲಿಕ್ ಮಾಡಬೇಕು.

Step-5: ಈ ಪುಟದ ಎಡಬದಿಯಲ್ಲಿ ಕಾಣುವ  “ಲಿಂಕ್ ಆಧಾರ್/Link Aadhar” ಬಟನ್ ಮೇಲೆ ಕ್ಲಿಕ್ ಮಾಡಿ ಕೆಳಗಡೆ ಕಾಣುವ ನಿಮ್ಮ ಸರ್ವೆ ನಂಬರ್ ಒಂದೊಂದನ್ನು ಟಿಕ್ ಮಾಡಿಕೊಂಡು ಅದರ ಮುಂದೆ ಕಾಣುವ “Link” ಬಟನ್ ಮೇಲೆ ಕ್ಲಿಕ್ ಮಾಡಬೇಕು ನಂತರ ಮತ್ತೆ ನಿಮ್ಮ ಮೊಬೈಲ್ ಗೆ ಬರುವ 6 ಅಂಕಿಯ OTP ಅನ್ನು ನಮೂದಿಸಿ “Verify OTP” ಬಟನ್ ಮೇಲೆ ಕ್ಲಿಕ್ ಮಾಡಬೇಕು ಅಗ “ಪಹಣಿಯೊಂದಿಗೆ ನಿಮ್ಮ ಆಧಾರ್ ಅನ್ನು ಲಿಂಕ್ ಮಾಡಲು ನೀವು ಬಯಸುವಿರಾ?/ Do you want to link your Aadhaar with the RTC?” ಎಂದು ಪ್ರಶ್ನೆ ತೋರಿಸುತ್ತದೆ ಅದಕ್ಕೆ ಹೌದು/Yes ಎಂದು ಕ್ಲಿಕ್ ಮಾಡಿದರೆ ನಿಮ್ಮ ಪಹಣಿಯನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ/Your RTC is linked with the Aadhaar ಎನ್ನುವ ಸಂದೇಶ ಬರುತ್ತದೆ.

ಇದೇ ರೀತಿ ಒಂದೊಂದು ಸರ್ವೆ ನಂಬರ್ ಅನ್ನು ಟಿಕ್ ಮಾಡಿಕೊಂಡು OTP ಪಡೆದು ಆಧಾರ್ ಕಾರ್ಡ ಅನ್ನು ನಿಮ್ಮ ಎಲ್ಲಾ ಸರ್ವೆ ನಂಬರ್ ಗಳಿಗೆ ಲಿಂಕ್ ಮಾಡಬೇಕು.

ಇದನ್ನೂ ಓದಿ: Agriculture officer recruitment-2024: ಕೃಷಿ ಇಲಾಖೆಯಲ್ಲಿ ಖಾಲಿ ಇರುವ 750 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮತಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

RTC adhar link status- ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿರುವುದನ್ನು ಚೆಕ್ ಮಾಡುವುದು ಹೇಗೆ?

ಈಗಾಗಲೇ ಪಹಣಿಗೆ ಆಧಾರ್ ಕಾರ್ಡ ಲಿಂಕ್ ಅಗಿದಿಯೇ ಎಂದು ಚೆಕ್ ಮಾಡುವುದು ಹೇಗೆಂದರೆ ಈ ಮೇಲೆ ತಿಳಿಸಿರುವ ವಿಧಾನವನ್ನು ಅನುಸರಿಸಿ ಕೊನೆಯಲ್ಲಿ ಅಂದರೆ Step-5 ಅನ್ನು “Link” ಬಟನ್ ಮೇಲೆ ಕ್ಲಿಕ್ ಮಾಡಿ OTP ಪಡೆದು “Verify” ಮೇಲೆ ಕ್ಲಿಕ್ ಮಾಡಿದಾಗ  “ಈ ಸರ್ವೆ ನಂಬರ್ ಈಗಾಗಲೇ ಲಿಂಕ್ ಆಗಿದೆ/Survey No. already linked” ಎನ್ನುವ ಸಂದೇಶ ತೋರಿಸಿದರೆ ನಿಮ್ಮ ಪಹಣಿಗೆ ಆಧಾರ್ ಲಿಂಕ್ ಅಗಿದೆ ಎಂದು.

ಈ ಅಂಕಣಕ್ಕೆ ಸಂಬಂದಿಸಿದ ಪ್ರಮುಖ ಉಪಯುಕ್ತ ಲಿಂಕ್ ಗಳು:

ಪಹಣಿಗೆ ಆಧಾರ್ ಜೋಡಣೆ ಮಾಡಲು: Click here
ಪಹಣಿ ಕುರಿತು ನಮ್ಮ ಪುಟದ ಇತರೆ ಅಂಕಣಗಳು: Click here