2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನಕ್ಕಾಗಿ(SSP Scholarship Last Date extended) ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್ ನಲ್ಲಿ ನಿಗದಿಪಡಿಸಲಾದ ಅಂತಿಮ ದಿನಾಂಕದ ಒಳಗಾಗಿ ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳಿಗೆ ಇದೀಗ ಮತ್ತೊಂದು ಅವಕಾಶ ನೀಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರವು ಈ ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್(SSP Scholarship Portal)ಮುಕಾಂತರ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳಿಂದ ವಿದ್ಯಾರ್ಥಿಗಳಿಗೆ ನೀಡುವ ಎಲ್ಲಾ ವಿದ್ಯಾರ್ಥಿ ವೇತನಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಆಗಿದೆ.
ಈ ಪೋರ್ಟಲ್ ನ ಅಡಿಯಲ್ಲಿ ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಗಳು ಸೇರಿದಂತೆ ಎಲ್ಲಾ ಸರ್ಕಾರಿ ವಿದ್ಯಾರ್ಥಿವೇತನಗಳಿಗೆ ಈ ಒಂದೇ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: E-Khatha-ಹಳ್ಳಿಗರಿಗೂ ಸಿಹಿ ಸುದ್ದಿ! ಅನಧಿಕೃತ ಆಸ್ತಿಗಳಿಗೆ ಇ-ಖಾತಾ!
ಇದೀಗ 2023- 24 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ಸ್ಟೇಟ್ ಸ್ಕಾಲರ್ಷಿಪ್ ಪೋರ್ಟಲ್ ನ ಅಡಿಯಲ್ಲಿ ನಿಗದಿಪಡಿಸಲಾಗಿದ್ದಂತಹ ಅಂತಿಮ ದಿನಾಂಕದ ಒಳಗಾಗಿ ವಿವಿಧ ಕೋರ್ಸ್ ಗಳು ಆರಂಭವಾಗಿರದ ಕಾರಣ ಹಾಗೂ ನಿಗದಿತ ಸಮಯದ ಒಳಗಾಗಿ ಕೌನ್ಸೆಲಿಂಗ್ ಪ್ರಕ್ರಿಯೆ ಮುಗಿಯದ ಕಾರಣಗಳಿಂದಾಗಿ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳಿಗೆ ಈಗ ಮತ್ತೊಂದು ಅವಕಾಶ ನೀಡಿದೆ.
Last Date-ಇದಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಮತ್ತೊಂದು ಅವಕಾಶ ನೀಡಿರುವ ಕಾರಣದಿಂದಾಗಿ ಕೊನೆಯ ದಿನಾಂಕವನ್ನು ಮಾರ್ಚ್ 30, 2025 ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸದೆ ಇರುವ ಅಭ್ಯರ್ಥಿಗಳು ಈ ನಿಗದಿತ ದಿನಾಂಕದ ಒಳಗಾಗಿ ಕೆಳಗೆ ನೀಡಿರುವ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ
ಇದನ್ನೂ ಓದಿ: Anganwadi Worker Salary-ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Documents For SSP-ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲಾತಿಗಳು ಹಾಗೂ ಮಾಹಿತಿಗಳು :
• ವಿದ್ಯಾರ್ಥಿಯ ಆಧಾರ್ ಸಂಖ್ಯೆ ಹಾಗೂ ಆಧಾರ್ ಕಾರ್ಡಿನಲ್ಲಿರುವ ಹಾಗೆ ಹೆಸರು
• ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್
• ಇಮೇಲ್ ಐಡಿ
• SSLC ಯ ನೋಂದಣಿ ಸಂಖ್ಯೆ
• ವಿದ್ಯಾರ್ಥಿಯ ಹೆಸರಿನಲ್ಲಿ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ
• ಹಾಸ್ಟೆಲ್ ನಲ್ಲಿ ಇದ್ದಲ್ಲಿ ಹಾಸ್ಟೆಲ್ ವಿವರಗಳು
• ವಿಕಲಚೇತನರಾಗಿದ್ದಲ್ಲಿ UDID ಗುರುತಿನ ಸಂಖ್ಯೆ
• ಕಾಲೇಜು ದಾಖಲಾತಿ ಪ್ರಮಾಣ ಪತ್ರ ಮತ್ತು ಕಾಲೇಜು ನೋಂದಣಿ ಸಂಖ್ಯೆ
ಇದನ್ನೂ ಓದಿ: Property Rights Act-ತಂದೆ-ತಾಯಿಯನ್ನು ಆರೈಕೆ ಮಾಡದಿದ್ದರೆ ಆಸ್ತಿಯಲ್ಲಿ ಪಾಲಿಲ್ಲ: ಸಚಿವ ಕೃಷ್ಣ ಬೈರೇಗೌಡ
How to Apply-ಅರ್ಜಿ ಸಲ್ಲಿಸುವುದು ಹೇಗೆ?
ಸ್ಟೇಟ್ ಸ್ಕಾಲರ್ಶಿಪ್ ಪೋರ್ಟಲ್ ನಲ್ಲಿ ನೀವು ಇಲ್ಲಿಯವರೆಗೆ ನೋಂದಾಯಿಸದೆ ಇದ್ದಲ್ಲಿ, ಹೊಸದಾಗಿ ನೋಂದಾಯಿಸಿಕೊಂಡು ಅರ್ಜಿ ಸಲ್ಲಿಸಬೇಕು. ಈಗಾಗಲೇ ನೀವು ನೋಂದಾಯಿಸಿಕೊಂಡಿದ್ದಲ್ಲಿ ನೇರವಾಗಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆಗಳಾದಲ್ಲಿ ಅಥವಾ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಲು ಬಯಸುವುದಾದರೆ ಅಧಿಕೃತ ಸಹಾಯವಾಣಿ ಸಂಖ್ಯೆ 1902 ಗೆ ಕರೆ ಮಾಡಿ ಸಹಾಯ ಪಡೆಯಿರಿ.
Online application link-ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ (SSP Portal) ಅಧಿಕೃತ ಜಾಲತಾಣ : Apply Now