Free goat-sheep training-ಉಚಿತ ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!

ಪಶುಪಾಲನಾ ಮತ್ತು ಪಶು ವೈದ್ಯಕೀಯ  ಸೇವಾ ಇಲಾಖೆಯ ದಾವಣಗೆರೆ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಉಚಿತ ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Free goat-sheep training-ಉಚಿತ ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ!
Free goat-sheep training-2024

ಪಶುಪಾಲನಾ ಮತ್ತು ಪಶು ವೈದ್ಯಕೀಯ  ಸೇವಾ ಇಲಾಖೆಯ ದಾವಣಗೆರೆ ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಉಚಿತ ಕುರಿ-ಮೇಕೆ ಸಾಕಾಣಿಕೆ ತರಬೇತಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಅರ್ಜಿದಾರರು ಕೂಡಲೇ ಈ ಅಂಕಣದಲ್ಲಿ ನೀಡಿವ ವಿವರವನ್ನು ಸಂಪೂರ್ಣವಾಗಿ ತಿಳಿದುಕೊಂಡು ತರಬೇತಿಯಲ್ಲಿ ಹಾಜರಾಬಹುದು.

ಇದನ್ನೂ ಓದಿ: Parihara list-ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಬಿಡುಗಡೆ!

Free goat-sheep training- ಈ ತರಬೇತಿಯು ಯಾವೆಲ್ಲ ವಿಷಯಗಳನ್ನು ಹೊಂದಿರುತ್ತದೆ?

ಈ ತರಬೇತಿಯಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ಮಾಡಲು ಆಸಕ್ತಿಯಿರುವವರಿಗೆ ಈ ವೃತ್ತಿಯನ್ನು/ಸಾಕಾಣಿಕೆಯನ್ನು ಆರಂಭಿಸಲು ಪ್ರಸ್ತುತ ಚಾಲ್ತಿಯಲ್ಲಿರುವ ಆಧುನಿಕ ವೈಜ್ನಾನಿಕ ಪದ್ದತಿಗಳ ಕುರಿತು ಸಂಪೂರ್ಣ ಮಾಹಿತಿ ತಿಳಿಸಲಾಗುತ್ತದೆ.

ಕುರಿ-ಮೇಕೆ ಸಾಕಾಣಿಕೆಗೆ ಸರಕಾರದಿಂದ ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬಹುದು? ಅರ್ಜಿ ಸಲ್ಲಿಕೆ ವಿಧಾನ ಹೇಗಿರುತ್ತದೆ? ಎಲ್ಲಿ ಅರ್ಜಿ ಸಲ್ಲಿಸಬೇಕು? ಅರ್ಜಿ ವಿಲೇವಾರಿ ಪ್ರಕ್ರಿಯೆ ಇತ್ಯಾದಿ ಮಾಹಿತಿ ತಿಳಿಸಿಕೊಡಲಾಗುತ್ತದೆ.

ಒಟ್ಟಿನಲ್ಲಿ ಸಂಕ್ಷೀಪ್ತವಾಗಿ ಕುರಿ-ಮೇಕೆ ಸಾಕಾಣಿಕೆ ಪ್ರಾರಂಭಿಸಲು ಅಗತ್ಯ ಮಾಹಿತಿಯನ್ನು ಈ ತರಬೇತಿಯಲ್ಲಿ ಅಭ್ಯರ್ಥಿಗಳು ಪಡೆದುಕೊಳ್ಳಬಹುದು.

ಇದನ್ನೂ ಓದಿ: Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

Goat-sheep training date- ತರಬೇತಿ ನಡೆಯುವ ದಿನಾಂಕ:

ಈ ತರಬೇತಿಯ ದಿನಾಂಕ: ಜನವರಿ ಮತ್ತು ಜನವರಿ ರಂದು ಒಟ್ಟು ಎರಡು ದಿನ ನಡೆಯಲಿದೆ.

sheep training center karnataka- ತರಬೇತಿಯಲ್ಲಿ ಭಾಗವಹಿಸಲು ಸಲ್ಲಿಸಬೇಕಾದ ದಾಖಲಾತಿಗಳು:

ಅರ್ಜಿದಾರರ ಅಧಾರ್ ಕಾರ್ಡ ಪ್ರತಿ.
ಅರ್ಜಿದಾರರ ಪೋಟೋ.

ಮೇಲಿ ತಿಳಿಸಿರುವ ಎರಡು ಸಹ ಎರಡು ಪ್ರತಿಯನ್ನು ತೆಗೆದುಕೊಂಡು ತರಬೇತಿ ದಿನ ಹಾಜರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

ತರಬೇತಿ ನಡೆಯುವ ಸ್ಥಳ:

ಪಶುವೈದ್ಯಕೀಯ ತರಬೇತಿ ಕೇಂದ್ರ, ಪಶು ಆಸ್ಪತ್ರೆ ಆವರಣ, ದಾವಣಗೆರೆ.

ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ನೇರವಾಗಿ ತರಬೇತಿ ದಿನ ಅಗತ್ಯ ದಾಖಲಾತಿಗಳ ಸಮೇತ ಭಾಗವಹಿಸಬಹುದು ಅಥವಾ ಈ 0819223377 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.