ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿವಿಧ ಬಗ್ಗೆಯ ಪ್ರೋತ್ಸಾಹಧನವನ್ನು(Student Incentives) ನೀಡಲಾಗುತ್ತದೆ ಇದರಂತೆ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಪ್ರೋತ್ಸಾಹಧನವನ್ನು ದುಪ್ಪಟ್ಟು ಮಾಡಿ ಹೊಸ ಆದೇಶ ಹೊರಡಿಸಲಾಗಿದೆ.
ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಉತೇಜನ ನೀಡಲು ಅರ್ಥಿಕವಾಗಿ ನೆರವು ನೀಡುವ ವಿವಿಧ ಯೋಜನೆಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಈಗಾಗಲೇ ಅನುಷ್ಥಾನಗೊಳಿಸಲಾಗುತ್ತಿದ್ದು, ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಅಂದರೆ IIT/IIM/IISC/NIT ಮುಂತಾದ ರಾಷ್ಟ್ರೀಯ ಸಂಸ್ಥೆಗಳಲ್ಲಿ ದಾಖಲಾತಿಯನ್ನು ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಏರಿಕೆ ಮಾಡಲಾಗಿದೆ.
ಇದನ್ನೂ ಓದಿ: Maize msp price- ಕೆಎಂಎಫ್ ನಿಂದ ರೂ 2,400/- ದರದಲ್ಲಿ ಮೆಕ್ಕೆಜೋಳ ಖರೀದಿ!
Student Incentives details- ಪ್ರೋತ್ಸಾಹಧನ ಎಷ್ಟು ಏರಿಕೆ ಮಾಡಲಾಗಿದೆ?
ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಾದ ಐ.ಐ.ಟಿ /ಐ.ಐ.ಎಂ/ಐ.ಐ.ಎಸ್.ಸಿ/ಎನ್.ಐ.ಟಿ ಮುಂತಾದ ಸಂಸ್ಥೆಗಳಲ್ಲಿ ದಾಖಲಾತಿ ಪಡೆಯುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಒಂದು ಬಾರಿ ನೀಡುವ ಪ್ರೋತ್ಸಾಹಧನವನ್ನು ರೂ.1.00 ಲಕ್ಷಗಳಿಂದ ರೂ. 2.00 ಲಕ್ಷಗಳಿಗೆ ಹೆಚ್ಚಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ನೂತನ ಆದೇಶ ಹೊರಡಿಸಲಾಗಿದೆ.
MBBS ವಿದ್ಯಾರ್ಥಿಗಳಿಗೂ ಪ್ರೋತ್ಸಾಹಧನ:
ಈ ಇಲಾಖೆಯಿಂದ MBBS ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೂ ಪ್ರೋತ್ಸಾಹಧನ ನೀಡಲಾಗುತ್ತಿದ್ದು ಈ ಕುರಿತು ಇಲಾಖೆಯ ಪ್ರಕಟಣೆ ವಿವರ ಹೀಗಿದೆ:
ವಿದ್ಯಾರ್ಥಿಯೂ ಪಿ.ಯು.ಸಿಯಲ್ಲಿ ಶೇಕಡ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು NEET ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಪಡೆಯದೆ, ಆಡಳಿತ ಮಂಡಳಿಯ ಕೋಟಾದಡಿ MBBSಗೆ ಪ್ರವೇಶ ಪಡೆದಿರುವ ಪ್ರತಿಭಾನ್ವಿತ ಪರಿಶಿಷ್ಟ ಜಾತಿ ವಿದ್ಯಾಥಿಗಳಿಗೆ ಮೊದಲನೇ ವರ್ಷದಲ್ಲಿ ರೂ. 25.00 ಲಕ್ಷಗಳನ್ನು ಕಾಲೇಜು ಶುಲ್ಕವಾಗಿ ಪಾವತಿಸಲು ಮತ್ತು ಸದರಿ ವಿದ್ಯಾರ್ಥಿಯು MBBS ಮೊದಲನೇ ವರ್ಷದ ಪರೀಕ್ಷೆಯಲ್ಲಿ ಕನಿಷ್ಟ ಶೇಕಡ 60 ಅಂಕಗಳನ್ನು ಪಡೆದು ತೇರ್ಗಡೆಯಾದಲ್ಲಿ, ಪುನಃ ರೂ.25.00 ಲಕ್ಷಗಳ ಪ್ರೋತ್ಸಾಹಧನವನ್ನು ಮಂಜೂರು ಮಾಡುವ ಅಂಶವನ್ನು ಸೇರ್ಪಡೆ ಮಾಡಿ ಆದೇಶ ಹೊರಡಿಸಲಾಗಿದೆ.
ಇದನ್ನೂ ಓದಿ: New ration card- ಎಲ್ಲಾ ಜಿಲ್ಲೆಗಳಲ್ಲೂ ಹೊಸ ರೇಶನ್ ಕಾರ್ಡ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ!
Student Incentives application- ಅರ್ಜಿಯಲ್ಲಿ ಎಲ್ಲಿ ಸಲ್ಲಿಸಬೇಕು?
ಅರ್ಹ ವಿದ್ಯಾರ್ಥಿಗಳು ಅಗತ್ಯ ದಾಖಲಾತಿಗಳ ಸಮೇತ ನಿಮ್ಮ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಭೇಟಿ ಮಾಡಿ ಅರ್ಜಿ ಸಲ್ಲಿಕೆ ಕುರಿತು ಮಾಹಿತಿಯನ್ನು ಪಡೆದು ಅರ್ಜಿಯನ್ನು ಸಲ್ಲಿಸಬೇಕು.
ಅಗತ್ಯ ದಾಖಲೆಗಳು:
ವಿದ್ಯಾರ್ಥಿಯ ಆಧಾರ್ ಕಾರ್ಡ
ಬ್ಯಾಂಕ್ ಪಾಸ್ ಬುಕ್
ಸಂಸ್ಥೆಯಲ್ಲಿ ಪ್ರವೇಶ ಪಡೆದಿರುವ ಕುರಿತು ದಾಖಲಾತಿ ಪ್ರಮಾಣ ಪತ್ರ
ಪೋಟೊ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ
ಅಂಕಪಟ್ಟಿ.
ಇನ್ನು ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್: Click here