ವಾಹನ ಖರೀದಿಸಲು 3 ಲಕ್ಷದವರೆಗೆ ಸಹಾಯಧನ ಪಡೆಯಲು ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ! ಇಲ್ಲಿದೆ ವೆಬ್ಸೈಟ್ ಲಿಂಕ್.

Vehicle subsidy- "ಸ್ವಾವಲಂಬಿ ಸಾರಥಿ" ಯೋಜನೆಗೆ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಒದಗಿಸಿ ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬವುದು? ಮತ್ತು ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

"ಸ್ವಾವಲಂಬಿ ಸಾರಥಿ" ಯೋಜನೆಯಡಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ(KARNATAKA MINORITIES DEVELOPMENT CORPORATION LIMITED) ಟ್ಯಾಕ್ಸಿ ಅಥವಾ ಸರಕು ವಾಹನ, ಆಟೋ ರಿಕ್ಷಾ ಖರೀದಿಸಲು ಸಹಾಯಧನ(Vehicle subsidy scheme) ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ. 

ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿಗಳನ್ನು ಒದಗಿಸಿ ತಮ್ಮ ಮೊಬೈಲ್ ಮೂಲಕ ಅರ್ಜಿಯನ್ನು ಹೇಗೆ ಸಲ್ಲಿಸಬವುದು? ಮತ್ತು ಈ ಯೋಜನೆಯ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

Total Vehicle subsidy Amount- ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬವುದು?

ಪ್ರಸ್ತುತ ಈ ಯೋಜನೆಯಡಿ ಅರ್ಹ ಫಲಾನುಭವಿಗಳು ಬ್ಯಾಂಕುಗಳಿಂದ ಮಂಜೂರು ಮಾಡಿದ ಟ್ಯಾಕ್ಸಿ ಮತ್ತು ಸರಕು ವಾಹನಗಳನ್ನು ಖರೀದಿಸಲು ಪ್ರತಿ ಫಲಾನುಭವಿಗೆ ವಾಹನದ ಮೌಲ್ಯದ ಶೇ 50 ರಷ್ಟು ಅಥವಾ ಗರಿಷ್ಠ ರೂ. 3,00,000/- ರ ವರೆಗೆ ಸಹಾಯಧನವನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ ಒದಗಿಸಲಾಗುತ್ತದೆ

ಪ್ರಯಾಣಿಕರ ಆಟೋ ರಿಕ್ಷಾ ಖರೀದಿಸಲು ಆಸಕ್ತಿಯಿರುವ ಅರ್ಹರಿಗೆ ಗರಿಷ್ಠ ರೂ. 75,000/- ಸಹಾಯಧನ ನೀಡಲಾಗುತ್ತದೆ. ಈ ಸಹಾಯಧನ ಪಡೆಯಲು ವಾಹನದ ಉಳಿದ ಮೊತ್ತಕ್ಕೆ ಬ್ಯಾಂಕ್ ಸಾಲ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ ಈ ಕುರಿತು  ಬ್ಯಾಂಕ್ ಪತ್ರವನ್ನು ಒದಗಿಸಬೇಕಾಗುತ್ತದೆ.

ಇದನ್ನೂ ಓದಿ:  Free laptop scheme-2023: ಉಚಿತ ಲ್ಯಾಪ್‌ಟಾಪ್ ಪಡೆಯಲು ಅರ್ಜಿ ಆಹ್ವಾನ! ಅರ್ಜಿ ಸಲ್ಲಿಸಲು ಸೆ.27 ಕೊನೆಯ ದಿನ.

ಈ ಯೋಜನೆಯಡಿ ಸಹಾಯಧನ ಪಡೆಯಲು ಯಾರೆಲ್ಲ? ಅರ್ಜಿ ಸಲ್ಲಿಸಬವುದು.

ಅರ್ಜಿದಾರರು ಕರ್ನಾಟಕ ರಾಜ್ಯದ ಧಾರ್ಮಿಕ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದವರಾಗಿರಬೇಕು.
ಅರ್ಜಿ ಸಲ್ಲಿಸುವ ಇಚ್ಚಿಸುವವರ ವಯಸ್ಸು 18 ರಿಂದ 55 ವರ್ಷಗಳ ನಡುವೆ ಇರಬೇಕು.
ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕಾಗುತ್ತದೆ.
ಕುಟುಂಬದ ವಾರ್ಷಿಕ ಆದಾಯವು ರೂ. 4,50,000/- ಕ್ಕಿಂತ ಕಡಿಮೆ ಇರಬೇಕು.
ಅರ್ಜಿದಾರರು RTO ಕಚೇರಿಯಿಂದ ನೀಡುವ ಚಾಲನಾ ಪರವಾನಗಿ(DL) ಹೊಂದಿರಬೇಕು.
ಅರ್ಜಿದಾರರ ಕುಟುಂಬದ ಯಾವುದೇ ಸದಸ್ಯರು ಕೇಂದ್ರ/ರಾಜ್ಯ ಸರ್ಕಾರಿ ಉದ್ಯೋಗಿಯಾಗಬಾರದು.
ಕಳೆದ 05 ವರ್ಷಗಳಲ್ಲಿ ಅರ್ಜಿದಾರ ಅಥವಾ ಅವನ/ಅವಳ ಕುಟುಂಬದ ಸದಸ್ಯರು ಸರ್ಕಾರದ / ನಿಗಮದ ಯಾವುದೇ ಇತರ ಯೋಜನೆಯಡಿಯಲ್ಲಿ(ಅರಿವು ಯೋಜನೆ ಹೊರತುಪಡಿಸಿ) ಸಾಲ ಸೌಲಭ್ಯಗಳನ್ನು ಪಡೆದಿರಬಾರದು.

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು:

1)ವಾಹನ ಚಾಲನಾ ಪರವಾನಗಿ ಪ್ರತಿ
2)ಜಾತಿ/ಅಲ್ಪಸಂಖ್ಯಾತ ಪ್ರಮಾಣಪತ್ರ
3)ಆದಾಯ ಪ್ರಮಾಣಪತ್ರ
4)ಆಧಾರ್ ಕಾರ್ಡ್ ಪ್ರತಿ 
5)ಬ್ಯಾಂಕ್ ಪಾಸ್ ಬುಕ್ ಪ್ರತಿ
6)ವಾಹನದ ಅಂದಾಜು ದರಪಟ್ಟಿ
7)ಸ್ವಯಂ ಘೋಷಣೆ ಪತ್ರ

Laste date- ಅರ್ಜಿ ಸಲ್ಲಿಸುವ ಕೊನೆ ದಿನ: 

ಈ ಯೋಜನೆಯಡಿ ಸಹಾಯಧನ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು 25 ಸೆಪ್ಟೆಂಬರ್ 2023 ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ.

ಇದನ್ನೂ ಓದಿ:  Free sewing machine- ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಅಹ್ವಾನ!

"ಸ್ವಾವಲಂಬಿ ಸಾರಥಿ" ಯೋಜನೆಗೆ ನಿಮ್ಮ ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಬವುದು:

ಮೊಬೈಲ್ ನಲ್ಲೇ ಅರ್ಹ ಫಲಾನುಭವಿಗಳು ಅಗತ್ಯ ದಾಖಲಾತಿ ಸಮೇತ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕೃತ ವೆಬ್ಸೈಟ್  ಭೇಟಿ ಮಾಡಿ ಅರ್ಜಿ ಸಲ್ಲಿಸಬವುದು.

Step-1: https://kmdconline.karnataka.gov.in/Portal/login ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ವೆಬ್ಸೈಟ್ ಭೇಟಿ ಮಾಡಬೇಕು. ನಂತರ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ.

Step-2: ತದನಂತರ ಡಿಜಿಲಾಕರ್ ಅನ್ನು ಸಕ್ರಿಯಗೊಳಿಸಲು ನಿಮ್ಮ ಅಧಾರ್ ನಂಬರ್ ಮತ್ತು ಕ್ಯಾಪ್ಚರ್ ಹಾಕಿ "Next" ಬಟನ್ ಮೇಲೆ ಕ್ಲಿಕ್ ಮಾಡಬೇಕು, ಇದಾದ ಬಳಿಕ ಅಧಾರ್ ಕಾರ್ಡನಲ್ಲಿರುವ ಮೊಬೈಲ್ ಸಂಖ್ಯೆಗೆ ಬರುವ 6 ಅಂಕಿಯ OTP ಅನು ನಮೂದಿಸಿ "Continue" ಬಟನ್ ಮೇಲೆ ಕ್ಲಿಕ್ ಮಾಡಿ ನಂತರ 6 ಅಂಕಿಯ "DigiLocker Security PIN ಅನ್ನು ರಚಿಸಿಕೊಳ್ಳಬೇಕು. ನಂತರ ಬಳಿಕ ಅಂತಿಮವಾಗಿ ನಿಮ್ಮ "DigiLocker" ಅಕೌಂಟ್ ತೆರೆದುಕೊಳ್ಳುತ್ತದೆ. "Allow" ಬಟನ್ ಮೇಲೆ ಕ್ಲಿಕ್ ಮಾಡಿ.

Step-3: ಮುಂದೆ ನಿಮ್ಮ ವಿಳಾಸದ ವಿವರ ಮತ್ತು ಜಮೀನಿನ ವಿವರ ಅಗತ್ಯ ದಾಖಲೆಗಳ JPG/PDF ನಮೂನೆಗಳನ್ನು ಅಪ್ಲೊಡ್ ಮಾಡಿ ಅಂತಿಮವಾಗಿ "SUBMIT" ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ಅರ್ಜಿದಾರರು ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸ್ಥಿತಿಯನ್ನು ಚೆಕ್ ಮಾಡುವ ವಿಧಾನ:

Step-1:https://kmdconline.karnataka.gov.in/Portal/login ಲಿಂಕ್ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿ ಸಲ್ಲಿಸುವಾಗ ನೀವು ಹಾಕಿರುವ ಮೊಬೈಲ್ ಸಂಕ್ಯೆಯನ್ನು ನಮೂದಿಸಿ "ಸಲ್ಲಿಸಿ" ಬಟನ್ ಮೇಲೆ ಕ್ಲಿಕ್ ಮಾಡಿ ನಿಮ್ಮ ಅರ್ಜಿ ಸ್ಥಿತಿ ಚೆಕ್ ಮಾಡಿಕೊಳ್ಳಬವುದು.

ಗ್ಯಾರಂಟಿ ಯೋಜನೆಗಳ ಅಂಕಣಗಳು:

Gruhalakshmi status check: ನಿಮ್ಮ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದ್ದರು, ಗೃಹಲಕ್ಷ್ಮಿ ಹಣ  ಜಮಾ ಆಗದಿದ್ದರೆ ಏನು ಮಾಡಬೇಕು?

Gruhalakshmi amount- ಗೃಹಲಕ್ಷ್ಮಿ ಹಣ ನಿಮ್ಮ ಖಾತೆಗೆ ಬಂದಿರುವುದನ್ನು ಚೆಕ್ ಮಾಡುವುದು ಹೇಗೆ?

How to check Gruhalakshmi application status: ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವುದು ಹೇಗೆ?

Anna bhagya DBT amount- 1.07 ಕೋಟಿ ಫಲಾನುಭವಿಗಳಿಗೆ ಆಗಸ್ಟ್ ತಿಂಗಳ ಅನ್ನಭಾಗ್ಯ ಹಣ ವರ್ಗಾವಣೆ! ನಿಮಗೆ ಬಂತಾ? ಚೆಕ್ ಮಾಡಿ.

Gruha Lakshmi : ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಈಗ ಮತ್ತಷ್ಟು ಸರಳ! ಅರ್ಜಿ ಸಲ್ಲಿಸಲು ಇನ್ನು ಮುಂದೆ ಮೇಸೆಜ್ ಗಾಗಿ ಕಾಯಬೇಕಿಲ್ಲ- ಸಚಿವೆ ಲಕ್ಷ್ಮಿ ಹೆಬ್ಬಾಲಕರ್.

Annabhagya August amount: ಅನ್ನಭಾಗ್ಯ  ಆಗಸ್ಟ್ ತಿಂಗಳ ಹಣ ವರ್ಗಾವಣೆ ಪ್ರಾರಂಭ! ನಿಮ್ಮ ಖಾತೆಗೆ ಹಣ ಬಂತಾ ಚೆಕ್ ಮಾಡಿ.

Electricity bill download: ಪ್ರತಿ ತಿಂಗಳ ಕರೆಂಟ್ ಬಿಲ್ ಅನ್ನು ನಿಮ್ಮ ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಿಕೊಳ್ಳಬವುದು! ಇಲ್ಲಿದೆ ವೆಬ್ಸೈಟ್ ಲಿಂಕ್.

ಆಹಾರ ಇಲಾಖೆಯಿಂದ ರದ್ದಾದ ರೇಷನ್  ಕಾರ್ಡ ಪಟ್ಟಿ ಬಿಡುಗಡೆ | Release of canceled ration card list by food department