Swavalambi Yojana application-ಸ್ವಾವಲಂಬಿ ಯೋಜನೆಯಡಿ 1.00 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಒಟ್ಟು ಎರಡು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಸ್ವಾವಲಂಬಿ(Swavalambi Yojana application) ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಫಲಾನುಭವಿಗಳು ಪಡೆದುಕೊಳ್ಳಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Swavalambi Yojana application-ಸ್ವಾವಲಂಬಿ ಯೋಜನೆಯಡಿ 1.00 ಲಕ್ಷದವರೆಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ!
bank loan subsidy yojana application-2024

ಆರ್ಥಿಕವಾಗಿ ಹಿಂದುಳಿದಿರುವ ಬ್ರಾಹ್ಮಣ ಕುಟುಂಬಗಳ ಶ್ರೇಯೋಭಿವೃದ್ಧಿಗಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವತಿಯಿಂದ ಸ್ವಯಂ ಉದ್ಯೋಗಿ ಬ್ರಾಹ್ಮಣರಿಗೆ 5 ಲಕ್ಷ ರೂ.ವರೆಗೆ ಸರ್ಕಾರಿ ಸಹಾಯಧನ ನೀಡಲಾಗುತ್ತಿದ್ದು.

ಒಟ್ಟು ಎರಡು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಸ್ವಾವಲಂಬಿ(Swavalambi Yojana application) ಮತ್ತು ಸಾಂದೀಪಿನಿ ಶಿಷ್ಯ ವೇತನದ ಯೋಜನೆಗಳ ಉಪಯೋಗವನ್ನು ಅರ್ಹರು ಫಲಾನುಭವಿಗಳು ಪಡೆದುಕೊಳ್ಳಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಎಲ್ಲಿ ಅರ್ಜಿ ಸಲ್ಲಿಸಬೇಕು ಅಗತ್ಯ ದಾಖಲಾತಿಗಳೇನು? ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Panchayat raj job- 51 ಪಂಚಾಯತ್ ರಾಜ್ ಫೆಲೋಶಿಪ್ ಹುದ್ದೆಗೆ ಅರ್ಜಿ ಆಹ್ವಾನ! ತಿಂಗಳಿಗೆ 61,500/- ವೇತನ.

ಯೋಜನೆವಾರು ಸಹಾಯಧನ ವಿವರ ಹೀಗಿದೆ:

1) ಸ್ವಾವಲಂಬಿ ಯೋಜನೆ(Swavalambi Yojana):

ಈ ಯೋಜನೆಯಡಿ ಅರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗೃಹ/ ಗುಡಿ ಕೈಗಾರಿಕೆ ಇತ್ಯಾದಿ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ಪಡೆದ ಬ್ಯಾಂಕ್ ಸಾಲಕ್ಕೆ 1.00 ಲಕ್ಷದವರೆಗೆ ಸಹಾಯ ಧನ ನೀಡಲಾಗುತ್ತದೆ.

2) ಸಾಂದೀಪಿನಿ ಶಿಷ್ಯ ವೇತನದ ಯೋಜನೆ(Sandeepni Yojana):

ಈ ಯೋಜನೆಯಡಿ ಬ್ರಾಹ್ಮಣ ಸಮುದಾಯದಲ್ಲಿ ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅರ್ಥಿಕವಾಗಿ ನೆರವು ನೀಡಲು 15,000 ರೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಇದನ್ನೂ ಓದಿ: Parihara list-ಬೆಳೆ ಪರಿಹಾರದ ಹಣ ಜಮಾ ಅಗಿರುವ ಫಲಾನುಭವಿ ರೈತರ ಪಟ್ಟಿ ಬಿಡುಗಡೆ!

1) ಸ್ವಾವಲಂಬಿ ಯೋಜನೆ ವಿವರ(Swavalambi Yojana):

ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:

  • ಅರ್ಜಿದಾರರ ಅಧಾರ್ ಕಾರ್ಡ ಪ್ರತಿ
  • ಪೋಟೋ
  • ಬ್ಯಾಂಕ್ ನಲ್ಲಿ ಸಾಲ ಪಡೆದಿರುವ ಬಗ್ಗೆ ದೃಡೀಕರಣ
  • ಸಾಲ ಪಡೆದ ಬ್ಯಾಂಕ್ ನ ಪಾಸ್ ಬುಕ್ ಪ್ರತಿ
  • ಬ್ಯಾಂಕ್ ನಿಂದ ಪಡೆದ ಸಾಲದ ಮಂಜೂರಾತಿ ಪತ್ರ

ಎಲ್ಲಿ ಅರ್ಜಿ ಸಲ್ಲಿಸಬೇಕು?

ಈ ಲಿಂಕ್  Application form Download link ಮೇಲೆ ಕ್ಲಿಕ್ ಮಾಡಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧಿಕೃತ ವೆಬ್ಸೈಟ್ ಭೇಟಿ ಮಾಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಎಲ್ಲಾ ವಿವರವನ್ನು ಸರಿಯಾಗಿ ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಮಂಡಳಿಯ ಈ ವಿಳಾಸಕ್ಕೆ ಪೋಸ್ಟ್ ಮಾಡಬೇಕು.

ಅರ್ಜಿದಾರರ ಗಮನಕ್ಕೆ ಮಂಡಳಿಯ ಸೂಚನೆಗಳು:

(1) ಸದರಿ ಯೋಜನೆಯಡಿ ಬ್ರಾಹ್ಮಣ ಸಮುದಾಯದವರಿಗೆ ಸ್ವಯಂ ಉದ್ಯೋಗಕ್ಕೆ ವ್ಯಾಪಾರ, ಅಂಗಡಿ, ಹೈನುಗಾರಿಕೆ, ಹೊಲಿಗೆ ವೃತ್ತಿ, ಆಟಿಕೆ ತಯಾರಿಕೆ, ಮೊಬೈಲ್ ಅಂಗಡಿ, ಗೃಹ/ ಗುಡಿ ಕೈಗಾರಿಕೆ ಇತ್ಯಾದಿ ಆದಾಯ ಬರುವಂತಹ ಲಾಭದಾಯಕ ಉದ್ಯಮಗಳನ್ನು ಸ್ಥಾಪಿಸಲು ಪಡೆದ ಸಾಲಕ್ಕೆ ಸಹಾಯ ಧನ ನೀಡಲಾಗುವುದು.

(2) ಯಾವುದೇ ರಾಷ್ಟ್ರೀಕೃತ ಬ್ಯಾಂಕ್ ನಿಂದ 2023-24 ನೇ ಸಾಲಿನಲ್ಲಿ ಸ್ವಯಂ ಉದ್ಯೋಗಕ್ಕಾಗಿ ಸಾಲವನ್ನು ಪಡೆದಿರಬೇಕು.

ಇದನ್ನೂ ಓದಿ: Gruhalakshmi pending amount-ಈ ಕೆಲಸ ಮಾಡಿದ ಬಳಿಕ ನನ್ನ ಖಾತೆಗೆ ಒಂದೇ ಬಾರಿಗೆ ಬಾಕಿ ಕಂತಿನ ಎಲ್ಲಾ ಗೃಹಲಕ್ಷ್ಮಿ ಯೋಜನೆ ಹಣ ಬಂತು!

(3) ಈ ಅರ್ಜಿಯನ್ನು ಸಂಪೂರ್ಣವಾಗಿ ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವುದು.

(4) ಸದರಿ ಸಹಾಯಧನಕ್ಕಾಗಿ ಸಲ್ಲಿಸಲಾಗುವ ಅರ್ಜಿಯನ್ನು, ಸಾಲ ಪಡೆದ ಬ್ಯಾಂಕ್ ನಿಂದ ದೃಢೀಕರಣಗೊಳಿಸಿ ಮಂಡಳಿಗೆ ಸಲ್ಲಿಸುವುದು.

ಪ್ರಮುಖ ಉಪಯುಕ್ತ ಲಿಂಕ್ ಗಳು:

ಅರ್ಜಿ ನಮೂನೆ ಡೌನ್ಲೋಡ್: Donwload Now  

ಸ್ವಾವಲಂಬಿ ಯೋಜನೆ ಅಧಿಕೃತ ಮಾರ್ಗಸೂಚಿ: Donwload Now 

2) ಸಾಂದೀಪಿನಿ ಶಿಷ್ಯ ವೇತನದ ಯೋಜನೆ ವಿವರ(Sandeepni Yojana):

ಈ ಯೋಜನೆಯಡಿ ಬ್ರಾಹ್ಮಣ ಸಮುದಾಯದಲ್ಲಿ ಅರ್ಥಿಕವಾಗಿ ಹಿಂದುಳಿದ ಪಿಯುಸಿ ಮತ್ತು ಡಿಗ್ರಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಅರ್ಥಿಕವಾಗಿ ನೆರವು ನೀಡಲು 15,000 ರೂ ವಿದ್ಯಾರ್ಥಿ ವೇತನ ನೀಡಲಾಗುತ್ತದೆ.

ಅರ್ಹ ವಿದ್ಯಾರ್ಥಿಗಳು ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರವನ್ನು 31 ಜನವರಿ 2024ರ ಒಳಗಾಗಿ ಭೇಟಿ ಮಾಡಿ ಅರ್ಜಿ ಸಲ್ಲಿಸಬಹುದು.

ಇದನ್ನೂ ಓದಿ: Gruhalakshmi status-2024: ರೇಷನ್ ಕಾರ್ಡ ನಂಬರ್ ಹಾಕಿ ಗೃಹಲಕ್ಷ್ಮಿ ಹಣ ಎಷ್ಟು? ಜಮಾ ಅಗಿದೆ ಎಂದು ತಿಳಿಯಬವುದು.

ಹೆಚ್ಚಿನ ಮಾಹಿತಿಗಾಗಿ:

ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ವೆಬ್ಸೈಟ್: Click here
ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸಹಾಯವಾಣಿ ಸಂಖ್ಯೆ: 080-29605888