ವೈಜ್ಞಾನಿಕ ಬೋರ್ಡೊ ದ್ರಾವಣ ತಯಾರಿಕೆ ವಿಧಾನ.
ನಮ್ಮ ರಾಜ್ಯದಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದ ರೈತರು ಮಳೆಗಾಲದಲ್ಲಿ ಅಡಿಕೆ ಕೊಳೆ ರೋಗಕ್ಕೆ ಬೋರ್ಡೊ ದ್ರಾವಣವನ್ನು ಸಿಂಪರಣೆ ಮಾಡುತ್ತಾರೆ ಈ ದ್ರಾವಣ ತಯಾರಿಕೆ ಕುರಿತು ರೈತರು ಅನುಸರಿಸಬೇಕಾದ ಕ್ರಮಗಳನ್ನು ಈ ಕೆಳಗೆ ವಿವರಿಸಲಾಗಿದೆ. ಬೋರ್ಡೊ ದ್ರಾವಣ ಅಪಾಯಕಾರಿಯಲ್ಲದ ಬಹಳ ಉಪಯುಕ್ತವಾದ ಶಿಲೀಂದ್ರನಾಶಕ, ಆದರೆ ಇದನ್ನು ವೈಜ್ಞಾನಿಕವಾಗಿ ತಯಾರಿಸುವ ವಿಧಾನದಲ್ಲಿ ತಪ್ಪುಗಳಾದರೆ ರಸಸಾರದಲ್ಲಾಗುವ ವ್ಯತ್ಯಾಸದಿಂದ ಸಸ್ಯರೋಗಗಳು ಸಮರ್ಪಕವಾಗಿ ನಿರ್ವಹಣೆಯಾಗುವುದಿಲ್ಲ. ಆದುದರಿಂದ ವೈಜ್ಞಾನಿಕ ಪದ್ಧತಿಯಲ್ಲಿ ಬೋರ್ಡೊ ದ್ರಾವಣವನ್ನು ತಯಾರಿಸಿ: ಸಿಂಪರಣೆ ಕೈಗೊಳ್ಳುವುದು ಪ್ರಸ್ತುತದಲ್ಲಿ ಅವಶ್ಯಕವಾಗಿದೆ. ಶೇ. 1 ರ … Read more