ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ತರಬೇತಿ(Free tailoring training) ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ತರಬೇತಿ ನಡೆಯುವ ಕೇಂದ್ರದ ವಿವರ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ವಿವರಿಸಲಾಗಿದೆ.
ಅರ್ಹ ಅರ್ಜಿದಾರರು ಈ ಅಂಕಣದಲ್ಲಿ ವಿವರಿಸಿರುವ ಸಂಫೂರ್ಣ ಮಾಹಿತಿಯನ್ನು ತಿಳಿದುಕೊಂಡು ಈ ತರಬೇತಿಯ ಪ್ರಯೋಜನವನ್ನು ಪಡೆದುಕೊಳ್ಳಬಹುದು.
ಇದನ್ನೂ ಓದಿ: Education loan – ವಿದ್ಯಾಭ್ಯಾಸ ಸಾಲ ಯೋಜನೆಯಡಿ ಸಾಲ ಪಡೆಯಲು ಅರ್ಜಿ ಆಹ್ವಾನ!
Free tailoring training- ಈ ತರಬೇತಿಯನ್ನು ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು?
1) ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
2) ಕನ್ನಡ ಬಾಷೆಯನು ಓದಲು ಮತ್ತು ಬರೆಯಲು ಬರಬೇಕು.
3) ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
4) ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.
ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:
ಈ ತರಬೇತಿಯು ಒಟ್ಟು 30 ದಿನ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಇದನ್ನೂ ಓದಿ: Bele vime-ಬೆಳೆ ವಿಮೆ ಪಡೆಯಲು ತಪ್ಪದೇ ಈ ಕೆಲಸ ಮಾಡಿ!
Bank loan for tailoring business- ಬ್ಯಾಂಕ್ ಮೂಲಕ ಸಾಲ ಸೌಲಭ್ಯ:
ಈ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 30 ದಿನದ ತರಬೇತಿಯಲ್ಲಿ ಉಚಿತವಾಗಿ ಹೋಲಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ಪಡೆಯಬಹುದು ಎಂದು ಸಹ ಮಾಹಿತಿ ನೀಡುವುದರ ಜೊತೆಗೆ ಸಾಲ ಪಡೆಯಲು ದಾಖಲಾತಿಗಳನ್ನು ಹೇಗೆ ಸಿದ್ದಪಡಿಸಬೇಕು? ಯಾವ ರೀತಿ ಸಾಲಕ್ಕೆ ಅರ್ಜಿ ಸಲ್ಲಿಸಬೇಕು ಎನ್ನುವ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.
Training Application-ತರಬೇತಿ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ:
ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಸಬಹುದು.
ಇದನ್ನೂ ಓದಿ: Male nakshatragalu: 2024ರ ಮಳೆ ನಕ್ಷತ್ರಗಳು ಮತ್ತು ಹಿರಿಯರ ಗಾದೆಗಳು! ಇಲ್ಲಿದೆ ಉಪಯುಕ್ತ ಮಾಹಿತಿ!