Udyogini scheme: ಉದ್ಯೋಗಿನಿ ಯೋಜನೆಯಡಿ 3 ಲಕ್ಷದವರೆಗೆ ಸಾಲ ಶೇ.50 ರಷ್ಟು ಸಹಾಯಧನ ಪಡೆಯಲು ಅರ್ಜಿ ಆಹ್ವಾನ!

ಮಹಿಳಾ ಅಭಿವೃದ್ಧಿ ನಿಗಮದಿಂದ ಎಲ್ಲಾ ವರ್ಗದ ಮಹಿಳೆಯರಿಗೆ ಸ್ವ-ಉದ್ಯೋಗ ಆರಂಬಿಸಲು ಅರ್ಥಿಕವಾಗಿ ಸಹಾಯ ನೀಡುವ ನಿಟ್ಟಿನಲ್ಲಿ ಉದ್ಯೋಗಿನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬವುದು? ಅಗತ್ಯ ದಾಖಲಾತಿ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಆಯ್ಕೆ ಪ್ರಕ್ರಿಯೆ ಇತ್ಯಾದಿ ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ. ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ಬಳಿಯಿರುವ ವಾಟ್ಸಾಪ್ ಗುಂಪುಗಳಿಗೆ ಶೇರ್ ಮಾಡಿ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಮಹಿಳೆಯರು ವ್ಯಾಪಾರ ಮತ್ತು ಸೇವಾ ಕ್ಷೇತ್ರಗಳಲ್ಲಿ ಸ್ವ-ಉದ್ಯೋಗ ಪ್ರಾರಂಭಿಸುವುದರ ಮೂಲಕ ಆರ್ಥಿಕ ಅಭಿವೃದ್ಧಿ ಹೊಂದಲು ಅನುಕೂಲವಾಗುವಂತೆ, ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಇಚ್ಛಿಸುವ ಮಹಿಳೆಯರಿಗೆ, ಬ್ಯಾಂಕುಗಳಿಂದ ಸಾಲ ಮತ್ತು ನಿಗಮದಿಂದ ಸಹಾಯಧನವನ್ನು ನೀಡುವ ಮೂಲಕ ಮಹಿಳೆಯರನ್ನು ಆರ್ಥಿಕವಾಗಿ ಸಶಕ್ತರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು “ಉದ್ಯೋಗಿನಿ” ಯೋಜನೆಯನ್ನು ಅನುಷ್ಥಾನ ಮಾಡಲಾಗುತ್ತಿದೆ. 

ಇದನ್ನೂ ಓದಿ: MSP price-2023: ಬೆಂಬಲ ಬೆಲೆಯಲ್ಲಿ ರಾಗಿ,ಜೋಳ,ಭತ್ತ ಖರೀದಿ! ಬೆಲೆ ಎಷ್ಟು? ನೊಂದಣಿ ಪ್ರಕ್ರಿಯೆ ಹೇಗಿರಲಿದೆ?

udyogini yojana subsidy amount-ಸಾಲ ಮತ್ತು ಸಹಾಯಧನ ಮೊತ್ತ ಎಷ್ಟು?

ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಅರ್ಥಿಕವಾಗಿ ಸ್ವಾವಲಂಬನೆ ಸಾಧಿಸಲು ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಾಲದ ಒಟ್ಟು ಘಟಕ ವೆಚ್ಚ ಕನಿಷ್ಟ ರೂ.1.00 ಲಕ್ಷದಿಂದ ಗರಿಷ್ಟ ರೂ.3.00 ಲಕ್ಷ ಒದಗಿಸಲಾಗುತ್ತದೆ ಸಹಾಯಧನದ ಮೊತ್ತ ಶೇ.50 ರಷ್ಟು ಗರಿಷ್ಟ ರೂ.1.50 ಲಕ್ಷ ವನ್ನು ನೀಡಲಾಗುತ್ತದೆ.  

ಸಾಮಾನ್ಯ ವರ್ಗ ಮತ್ತು ಇತರೆ ವರ್ಗದ ಫಲಾನುಭವಿಗಳಿಗೆ ಸಾಲದ ಘಟಕ ವೆಚ್ಚ ಗರಿಷ್ಟ ರೂ.3.00 ಲಕ್ಷ ಇದ್ದು,  ಸಹಾಯಧನದ ಮೊತ್ತವು ಶೇ 30 ರಷ್ಟು ಗರಿಷ್ಟ ರೂ.90,000/-. ವಾಗಿರುತ್ತದೆ.

ಅರ್ಜಿದಾರರ ವಯೋಮಿತಿ:

ಎಲ್ಲಾ ವರ್ಗದ ಮಹಿಳೆಯರಿಗೆ ವಯೋಮಿತಿ 18 ರಿಂದ 55 ವರ್ಷದ ಒಳಗಿರಬೇಕು.

ಯಾವೆಲ್ಲ ಸ್ವ-ಉದ್ಯೋಗವನ್ನು ಈ ಯೋಜನೆಯಡಿ ಕೈಗೊಳ್ಳಬವುದು?

ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಉಪ್ಪಿನಕಾಯಿ ತಯಾರಿಕೆ ಮತ್ತು ಮಾರಾಟ, ಅಗರಬತ್ತಿ ತಯಾರಿಕೆ, ಕಾಫಿ -ಟೀ ಅಂಗಡಿ, ಟೈಲರಿಂಗ್, ಎಸ್‌ಟಿಡಿ ಬೂತ್‌, ಬ್ಯೂಟಿ ಪಾರ್ಲರ್‌, ಕ್ಲಿನಿಕ್‌, ಜಿಮ್‌, ಸಿಹಿ ಅಂಗಡಿ, ಹಿಟ್ಟಿನ ಗಿರಣಿ, ಪೋಟೋ ಸ್ಟೂಡಿಯೋ, ಕಾಂಡಿಮೆಂಟ್ಸ್, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಹೆಚ್ಚುನ  ಸಣ್ಣ ಪ್ರಮಾಣದ ಉದ್ಯಮಗಳ ಆರಂಭಕ್ಕೆ ಈ ಯೋಜನೆಯಡಿ ಸಾಲ ಮತ್ತು ಸಹಾಯಧನ ಸಿಗಲಿದೆ. 

ಇದನ್ನೂ ಓದಿ: Udyogini Yojane-2023: ಮಹಿಳೆಯರಿಗೆ ಭರ್ಜರಿ ಸಿಹಿ ಸುದ್ದಿ ಮಹಿಳಾ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳಿಗೆ ಅರ್ಜಿ ಆಹ್ವಾನ!

Required documents for udyogini scheme-ಒದಗಿಸಬೇಕಾದ ಅಗತ್ಯ ದಾಖಲೆಗಳು:

  • ಅರ್ಜಿದಾರರ ಆಧಾರ್ ಕಾರ್ಡ್ ಪ್ರತಿ
  • ಅರ್ಜಿದಾರರ ಜನನ ಪ್ರಮಾಣ ಪತ್ರ
  • ವಿಳಾಸ ಹಾಗೂ ಆದಾಯ ಪ್ರಮಾಣಪತ್ರ
  • ಬಿಪಿಎಲ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಪ್ರತಿ
  • ಎಸ್‌ಟಿ/ ಎಸ್‌ಸಿ ಮಹಿಳೆಯರಾಗಿದ್ದರೆ ಜಾತಿ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
  • ಬ್ಯಾಂಕ್‌ ಪಾಸ್‌ಬುಕ್‌ನ ಪ್ರತಿ
  • ಯೋಜನಾ ವರದಿ.

udyogini scheme application-ಎಲ್ಲಿ ಅರ್ಜಿ ಸಲ್ಲಿಸಬೇಕು?

ಅರ್ಹ ಅರ್ಜಿದಾರರು ಮೇಲೆ ತಿಳಿಸಿರುವ ಎಲ್ಲಾ ದಾಖಲಾತಿಗಳನ್ನು ಸಿದ್ದಪಡಿಸಿಕೊಂಡು ಆನ್ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು ಅಥವಾ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರವನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಬೇಕು.

ಸೇವಾ ಸಿಂಧು ಪೋರ್ಟಲ್ ಲಿಂಕ್: Click here 

udyogini scheme last date- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಈ ಯೋಜನೆಯ ಪ್ರಯೋಜನ ಪಡೆಯಲು ಆಸಕ್ತ ಅರ್ಜಿದಾರರು 22 ಡಿಸೆಂಬರ್ 2023 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಯೋಜನೆವಿವರ
ಉದ್ಯೋಗಿನಿ ಯೋಜನೆಮಹಿಳೆಯರಿಗೆ ಸ್ವ-ಉದ್ಯೋಗಕ್ಕೆ ಸಾಲ ಮತ್ತು ಸಹಾಯಧನ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22-12-2023
ಮಹಿಳಾ ಅಭಿವೃದಿ ನಿಗಮದ ವೆಬ್ಸೈಟ್Click here 

ಇದನ್ನೂ ಓದಿ: DBT Status App-ಅರ್ಜಿದಾರರಿಗೆ ಗ್ಯಾರಂಟಿ ಯೋಜನೆಗಳ ಹಣ ಜಮಾ ಅಗಿರುವುದನ್ನು ತಿಳಿಯಲು ಮೊಬೈಲ್ ಅಪ್ಲಿಕೇಶನ್!

ಫಲಾನುಭವಿ ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ:

ಅರ್ಜಿದಾರರು ಕೊನೆಯ ದಿನಾಂಕದ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ಬಳಿಕ ನೀವು ಸಲ್ಲಿಸಿದ ಎಲ್ಲಾ ದಾಖಲಾತಿಗಳು ಸರಿಯಾಗಿವೆಯೇ ಎಂದು ನಿಗಮದ ಅಧಿಕಾರಿಗಳು ಪರಿಶೀಲಿಸಿ ದಾಖಲಾತಿ ಸರಿಯಾಗಿರುವ ಅರ್ಜಿದಾರರ ಪಟ್ಟಿಯನ್ನು ಸಿದ್ದಪಡಿಸಿ ಆಯ್ಕೆ ಸಮಿತಿಯ ಸಭೆಯಲ್ಲಿ ಮಂಡನೆ ಮಾಡಿ ಫಲಾನುಭವಿಗಳ ಅಂತಿಮ ಪಟ್ಟಿಯನ್ನು ತಯಾರಿಸಿ ಈ ಯೋಜನೆಯಡಿ ಸಹಾಯಧನದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ.

ಆಯ್ಕೆ ಸಮಿತಿಯ ಕಾರ್ಯನಿರ್ವಹಣೆ ಕುರಿತು ಸಂಬಂಧಪಟ್ಟ ಇಲಾಖೆಯ ಮಾರ್ಗಸೂಚಿ ಈ ಕೆಳಗಿನಂತಿದೆ:

1. ಮಾನ್ಯ ಶಾಸಕರುಗಳ ನೇತೃತ್ವದಲ್ಲಿ ರಚಿಸಿರುವ ಆಯ್ಕೆ ಸಮಿತಿಯ ಮೂಲಕವೇ ಹಾಗೂ ನಿಗಧಿತ ಕಾಲಾವಧಿಯಲ್ಲಿಯೇ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮತ್ತು ಆಯ್ಕೆ ಪಟ್ಟಿಯನ್ನು ಪಡೆಯಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಮತ್ತು ಅದರ ಸಂಬಂಧಿತ ಜಿಲ್ಲಾ ಅಧಿಕಾರಿಗಳು ಸಂಬಂಧಿಸಿದ ಮಾನ್ಯ ಶಾಸಕರುಗಳನ್ನು ಸಂಪರ್ಕಿಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಕ್ರಮವಹಿಸುವುದು.

2 ಸದರಿ ಕಾಲಮಿತಿಯಲ್ಲಿ ಫಲಾನುಭವಿಗಳು ಆಯ್ಕೆಯಾಗದಿದ್ದಲ್ಲಿ ಇಲಾಖೆಯ ಇತರೇ ಯೋಜನೆಗಳ ಅನುಷ್ಠಾನಕ್ಕೆ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಸ್ತಿತ್ವದಲ್ಲಿರುವ ಸಮಿತಿಗಳನ್ನೇ ಈ ಯೋಜನೆಗೂ ಆಯ್ಕೆ ಸಮಿತಿಯನ್ನಾಗಿ ಪರಿಭಾವಿಸುವುದು.

ಈ ಯೋಜನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ಪಡೆಯಲು:

ಮಹಿಳಾ ಅಭಿವೃದ್ಧಿ ನಿಗಮದ ಕಚೇರಿ ವಿಳಾಸ: 6ನೇ ಮಹಡಿ. ಜಯನಗರ ವಾಣಿಜ್ಯ ಸಂಕೀರ್ಣ. 4ನೇ ಬ್ಲಾಕ್, ಜಯನಗರ, ಬೆಂಗಳೂರು-560011
ದೂರವಾಣಿ ಸಂಖ್ಯೆ: 080-26632973/26542307

ಮಹಿಳಾ ಅಭಿವೃದ್ಧಿ ನಿಗಮದ ವೆಬ್ಸೈಟ್ ಲಿಂಕ್: Click here 

ಇದನ್ನೂ ಓದಿ: Gruhalakshmi status update: ನಿಮಗೆ ಒಂದು ಬಾರಿಯು ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲ ಅಂದರೆ ತಪ್ಪದೇ ಈ ಕೆಲಸ ಮಾಡಿ!