Karnataka weather news-2024: ರಾಜ್ಯದ ಮುಂಗಾರು ಮಳೆ ಮುನ್ಸೂಚನೆ!

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 161 ಮಿಲಿ ಮೀಟರ್ ಮಳೆ(Karnataka weather news) ದಾಖಲಾಗಿರುತ್ತದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮದವರೆಗೆ ಮಳೆಯಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿರುತ್ತದೆ.

Karnataka weather news-2024: ರಾಜ್ಯದ ಮುಂಗಾರು ಮಳೆ ಮುನ್ಸೂಚನೆ!
Karnataka weather news-2024

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕರ್ನಾಟಕ ಮಳೆ ಮಾಹಿತಿ ನಕ್ಷೆಯನ್ವಯ  ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹಳ್ಳಿ ವ್ಯಾಪ್ತಿಯಲ್ಲಿ ಅತ್ಯಧಿಕ 161 ಮಿಲಿ ಮೀಟರ್ ಮಳೆ(Karnataka weather news) ದಾಖಲಾಗಿರುತ್ತದೆ. ಉಳಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮದವರೆಗೆ ಮಳೆಯಾಗಿದ್ದು ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆ ದಾಖಲಾಗಿರುತ್ತದೆ.

ಈ ಲೇಖನದಲ್ಲಿ ಮುಂಗಾರು ಮಳೆ ಮಾಹಿತಿ, ರಾಜ್ಯದ ನಾಳೆಯ ವರೆಗಿನ ಮಳೆ ಮುನ್ಸೂಚನೆ ಮತ್ತು ಮುಂದಿನ ಒಂದು ವಾರದ ಮಳೆ ಮುನ್ಸೂಚನೆ ವಿವರವನ್ನು ತಿಳಿಸಲಾಗಿದ್ದು ಈ ಮಾಹಿತಿ ಉಪಯುಕ್ತ ಅನಿಸಿದಲ್ಲಿ ತಪ್ಪದೇ ನಿಮ್ಮ ವಾಟ್ಸಾಪ್ ಗುಂಪುಗಳಲ್ಲಿ ಶೇರ್ ಮಾಡಿ.

Weather-ನಾಳೆ ಬೆಳಗ್ಗೆ(30-06-2024) ಬೆಳಿಗ್ಗೆ 8-00 ಗಂಟೆವರೆಗಿನ ರಾಜ್ಯದ ಮಳೆ ಮುನ್ಸೂಚನೆ ಮಾಹಿತಿ ವಿವರ:

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಬಿಟ್ಟು ಬಿಟ್ಟು ಮಳೆಯ ಮುನ್ಸೂಚೆನೆ ಇರುತ್ತದೆ. ಉಳಿದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಸಹ ಬಿಟ್ಟು ಬಿಟ್ಟು ಸಾಧಾರಣ ಮಳೆಯ ಮುನ್ಸೂಚೆನೆ ಇರುತ್ತದೆ. ಉಳಿದ ಭಾಗಗಳಲ್ಲಿ ದಿನದಲ್ಲಿ 2 ರಿಂದ 3 ಮಳೆಯ ಸಾಧ್ಯತೆ ಇದೆ. 

ಚಿಕ್ಕಮಗಳೂರು, ಕೊಡಗು, ಹಾಸನ,  ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ. 

ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಯಾದಗಿರಿ, ಕಲಬುರ್ಗಿ, ತುಮಕೂರು, ಹಾಗೂ ಬೀದರ್ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇರುತ್ತದೆ. 

ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. 

ಇದನ್ನೂ ಓದಿ: SSC Recruitment 2024- SSLC ಪಾಸಾದವರಿಗೆ 8326 ಹುದ್ದೆಗಳ ನೇಮಕಾತಿಗೆ ಅರ್ಜಿ!

Karnataka mansoon news- ರಾಜ್ಯದ ಮುಂಗಾರು ಮಳೆ ಮುನ್ಸೂಚನೆ ಮಾಹಿತಿ:

ಈಗಿನ ಪ್ರಕಾರ ಕರಾವಳಿ ಭಾಗಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 4ರಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ. 

ಜೂನ್ 30 ಹಾಗೂ ಜುಲೈ 1 ರಂದು ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದು, ಜುಲೈ 2 ರಿಂದ 4ರ ತನಕ ಕರಾವಳಿ ಭಾಗಗಳನ್ನು ಹೊರತು ಪಡಿಸಿ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.

ಜುಲೈ 5 ಅಥವಾ 6ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Next 7 days weather in karnataka-ಮುಂದಿನ ಒಂದು ವಾರದ ಮಳೆ ಮುನ್ಸೂಚನೆ:

ಇದನ್ನೂ ಓದಿ: RTC aadhar link-2024: ರೈತರ ಜಮೀನುಗಳಿಗೆ ಆಧಾರ್ ಲಿಂಕ್!

ಇದನ್ನೂ ಓದಿ: BEL Recruitment 2024 - ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಕಿರಿಯ ಸಹಾಯಕ ಹುದ್ದೆಗಳ ನೇಮಕಾತಿ

ಕರ್ನಾಟಕ ಮಳೆ ಮುನ್ಸೂಚನೆ ನಕ್ಷೆಯ ಮಾಹಿತಿಯನ್ವಯ ಮುಂದಿನ 7 ದಿನದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಮಳೆ ಮುನ್ಸೂಚನೆ ವಿವರ ಹೀಗಿದೆ, ಈ ಮೇಲಿನ ಪೋಟೋದಲ್ಲಿ ಗುರುತಿಸಿರುವ ಹಾಗೆ ಕೆಂಪು ಬಣ್ಣದಿಂದ ಸೂಚಿಸಿದ ಭಾಗಗಳಲ್ಲಿ ಅತ್ಯಧಿಕ ಮಳೆ ಬೀಳುವ ಸಾಧ್ಯತೆ ಇರುತ್ತದೆ. ಅದೇ ರೀತಿ ಹಸಿರು ಬಣ್ಣದಿಂದ ಗುರುತಿಸಿದ ಪ್ರದೇಶದಲ್ಲಿ ಉತ್ತಮ ಮಳೆ ಮುನ್ಸೂಚನೆ ನೀಡಲಾಗಿದೆ.

ಹಳದಿ ಬಣ್ಣದಿಂದ ಗುರುತು ಮಾಡಿದ ಭಾಗಗಳಲ್ಲಿ ಸಾಧಾರಣದಿಂದ ಮಧ್ಯಮದವರೆಗೆ ಮಳೆಯಾಗುವ ಸಾಧ್ಯತೆ ಇರುತ್ತದೆ.

ಮಾಹಿತಿ ಕೃಪೆ: ಸಾಹಿ ಶೇಖರ್ ಬಿ & KSNDC,Bengalore