Yuvandhi-2023: ಯುವನಿಧಿ ಯೋಜನೆಗೆ ಅರ್ಜಿ! ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ? ಇತ್ಯಾದಿ ಸಂಪೂರ್ಣ ಮಾಹಿತಿ ಲಭ್ಯ.

ಯುವ ನಿಧಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು ಯಾವ ದಿನದಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಸಚಿವರು ಹಂಚಿಕೊಂಡಿರುವ ಇತರೆ ಮಾಹಿತಿಯ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ಘೋಷಣೆ ಮಾಡಿತ್ತು, ಇದರಂತೆ ಮೊದಲ ಹಂತ ಮತ್ತು ಎರಡನೇ ಹಂತದಲ್ಲಿ ಇಲ್ಲಿಯವರೆಗೆ ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿ ಯೋಜನೆ, ಗೃಹ ಲಕ್ಷ್ಮೀ ಯೋಜನೆಗಳನ್ನು ಜಾರಿಗೆ ತರಲಾಗಿದ್ದು.

ಇನ್ನು ಬಾಕಿ ಉಳಿದಿರುವ ಕೊನೆಯ ಗ್ಯಾರಂಟಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಕೆ ಮತ್ತು ಯೋಜನೆ ಯಾವಾಗ ಜಾರಿಯಾಗುತ್ತದೆ ಎಂದು ಕಾಯುತ್ತಿದ್ದ ಯುವಕ-ಯುವತಿಯರಿಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಸಿಹಿ ಸುದ್ದಿ ನೀಡಿದ್ದಾರೆ.

ಯುವ ನಿಧಿ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು ಯಾವ ದಿನದಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಸಚಿವರು ಹಂಚಿಕೊಂಡಿರುವ ಇತರೆ ಮಾಹಿತಿಯ ವಿವರವನ್ನು ಈ ಅಂಕಣದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: Ganga kalyana yojana-ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಇನ್ನು 3 ದಿನ ಮಾತ್ರ ಬಾಕಿ!

ಯುವನಿಧಿ ಯೋಜನೆಯ ಜಾರಿಗಾಗಿ ಸರ್ಕಾರವು ಈಗಾಗಲೇ ತಯಾರಿಯನ್ನು ಮಾಡಿಕೊಂಡಿದ್ದು, ಜನವರಿ 2024ರಿಂದಲೇ ಈ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಶನಿವಾರ ಪತ್ರಿಕಾ ಮಾಧ್ಯಮದವರಿಗೆ ಮಾಹಿತಿ ಹಂಚಿಕೊಡಿದ್ದಾರೆ.

ಇದರ ಜೊತೆಯಲ್ಲೇ ಈ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭದ ದಿನಾಂಕವನ್ನು ಸಹ ತಿಳಿಸಿದ್ದಾರೆ.

Yuvanidhi Yojana-2023: ಯುವನಿಧಿಗೆ ಅರ್ಜಿ ಸಲ್ಲಿಕೆ ಯಾವ ದಿನದಿಂದ ಆರಂಭ?

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು/ನೋಂದಣಿ ಮಾಡಿಕೊಳ್ಳಲು 21 ಡಿಸೆಂಬರ್ 2023 ರಿಂದ ಪ್ರಾರಂಭವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದ್ದು, ಈ ಯೋಜನೆಯನ್ನು ಜನವರಿ 2024 ರಿಂದಲೇ ಜಾರಿ ಮಾಡಲಾಗುತ್ತದೆ ಎಂದು ಕೂಡಾ ವರದಿಯು ಉಲ್ಲೇಖ ಮಾಡಿದ್ದಾರೆ.

ಇದನ್ನೂ ಓದಿ: Bara parihara-2023: ರಾಜ್ಯ ಸರಕಾರದಿಂದ ಬರ ಪರಿಹಾರದ ಮೊತ್ತ ನಿಗದಿ! ಒಂದು ಎಕರೆಗೆ ಎಷ್ಟು ಸಿಗಲಿದೆ?

ಐದು ಲಕ್ಷ ಯುವಕರು ಈ ಯೋಜನೆಯ ಪ್ರಯೋಜನ

ಈ ಕುರಿತು ಇನ್ನಷ್ಟು ಮಾಹಿತಿ ತಿಳಿಸಿರುವ ಸಚಿವರು ಈ ಯೋಜನೆಯನ್ನು ಜನವರಿ 2024ರಿಂದ ಪ್ರಾರಂಭಿಸಲಾಗುವುದು, ಯೋಜನೆಯನ್ನು ನಿಗದಿತವಾಗಿ ಯಾವ ದಿನ ಆರಂಭಿಸಲಾಗುತ್ತದೆ ಎಂದು ಶೀಘ್ರವೇ ತಿಳಿಸುತ್ತೇವೆ ಎಂದು ಹೇಳಿದ್ದು. ಈ ಯೋಜನೆಯಿಂದ ನಿರುದ್ಯೋಗಿ ಯುವಜನರು ಹಣಕಾಸು ನೆರವು ದೊರೆಯಲಿದೆ. ಸುಮಾರು ಐದು ಲಕ್ಷ ಯುವಕರು ಈ ಯೋಜನೆಯ ಪ್ರಯೋಜನವನ್ನು ಪಡೆಯಲಿದ್ದಾರೆ ಎಂದು ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

Yuvanidhi Application-ಈ ಯೋಜನೆಗೆ ಅರ್ಜಿ ಸಲ್ಲಿಸಲು ಯಾರೆಲ್ಲ ಅರ್ಹರು?

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವರು ಕರ್ನಾಟಕದ ಖಾಯಂ ನಿವಾಸಿಯಾಗಿರಬೇಕು.

ಅರ್ಜಿದಾರರು ಪದವೀಧರರಾಗಿರಬೇಕು ಅಥವಾ ಡಿಪ್ಲೊಮಾ ಹೊಂದಿರುವವರಾಗಿರಬೇಕು.

ಅರ್ಜಿದಾರರು 2022-2023 ರಲ್ಲಿ ಅವನ / ಅವಳ ಪದವಿ ಅಥವಾ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿದಾರರು ಪದವಿ ಅಥವಾ ಡಿಪ್ಲೊಮಾ ತೇರ್ಗಡೆಯಾದ ದಿನಾಂಕದ ನಂತರ ಕನಿಷ್ಠ 180 ದಿನಗಳವರೆಗೆ ನಿರುದ್ಯೋಗಿಯಾಗಿರಬೇಕು.

ಇದನ್ನೂ ಓದಿ: Crop information- ಈ ತಂತ್ರಾಶದಲ್ಲಿ ತಾವು ಬೆಳೆದ ಬೆಳೆ ವಿವರ ಇದ್ದಲ್ಲಿ ಮಾತ್ರ ಬೆಳೆ ವಿಮೆ ಪರಿಹಾರ!

ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ?

ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣವನ್ನು ಮುಂದುವರಿಸುವ ಯುವಕರು.

ಅಪ್ರೆಂಟಿಸ್ ವೇತನದ ಫಲಾನುಭವಿ.

ಸ್ವಯಂ ಉದ್ಯೋಗ ಮಾಡಿಕೊಂಡಿರುವ ಯುವಕರು/ಯುವತಿಯರು.

ಸರ್ಕಾರದ ಇತರೆ ಯೋಜನೆಯಲ್ಲಿ ಆರ್ಥಿಕ ನೆರವು ಪಡೆಯುತ್ತಿರುವ ಫಲಾನುಭವಿಗಳು.

ಇದನ್ನೂ ಓದಿ: Poultry farm-ಕೋಳಿ ಸಾಕಾಣಿಕೆಗೆ ಯಾವೆಲ್ಲ ಪರವಾನಗಿಯನ್ನು ಪಡೆಯಬೇಕು? ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬವುದು?

Yuvanidhi Yojane amount- ಈ ಯೋಜನೆಯಡಿ ಎಷ್ಟು ಆರ್ಥಿಕ ನೆರವು ನೀಡಲಾಗುತ್ತದೆ?

(1)ಈ ಯೋಜನೆಯಡಿ ನಿರುದ್ಯೋಗಿ ಪದವೀಧರ ಯುವಕ/ಯುವತಿಯರಿಗೆ ಪ್ರತಿ ತಿಂಗಳು 3,000 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ.

(2) ನಿರುದ್ಯೋಗಿ ಡಿಪ್ಲೊಮಾ ಹೊಂದಿರುವ ಯುವಕ/ಯುವತಿಯರಿಗೆ ಪ್ರತಿ ತಿಂಗಳು 1,500 ರೂಪಾಯಿ ಮಾಸಿಕ ನಿರುದ್ಯೋಗ ಭತ್ಯೆ ಒದಗಿಸಲಗುತ್ತದೆ.

ಇನ್ನು ಹೆಚ್ಚಿನ ಗ್ಯಾರಂಟಿ ಯೋಜನೆಯ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: click here